ನಟಿ ರೂಪಾಲಿ ಗಂಗೂಲಿ ಬಿಜೆಪಿಗೆ ಸೇರ್ಪಡೆ

Prasthutha|

ದೆಹಲಿ: ಅನುಪಮಾ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

- Advertisement -


ಬುಧವಾರ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಪಕ್ಷಕ್ಕೆ ಸೇರ್ಪಡೆಯಾದ ನಂತರ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದಲ್ಲಿನ ಅಭಿವೃದ್ಧಿಯಿಂದಾಗಿ ನಾನು ಬಿಜೆಪಿಗೆ ಸೇರಿದ್ದೇನೆ ಎಂದು ನಟಿ ಹೇಳಿದರು.

ಅಭಿವೃದ್ಧಿಯ ಈ ಮಹಾಯಜ್ಞವನ್ನು ನೋಡಿದಾಗ ನನಗೂ ಇದರಲ್ಲಿ ಪಾಲ್ಗೊಳ್ಳಬೇಕು ಎಂದು ಅನಿಸುತ್ತದೆ. ನಾನು ಏನೇ ಮಾಡಿದರೂ ಸರಿಯಾಗಿ, ಒಳ್ಳೆಯದನ್ನು ಮಾಡುವಂತೆ ನಿಮ್ಮೆಲ್ಲರ ಆಶೀರ್ವಾದ ಮತ್ತು ಬೆಂಬಲ ಬೇಕು ಎಂದು ಅವರು ಹೇಳಿದರು.

Join Whatsapp