ನಟ ಅಲ್ಲು ಅರ್ಜುನ್​ ಅರೆಸ್ಟ್: ಪೊಲೀಸರು ಹೇಳಿದ್ದೇನು?

Prasthutha|

ಹೈದರಾಬಾದ್: ಅಲ್ಲು ಅರ್ಜುನ್ ಅನ್ನು ಹೈದರಾಬಾದ್ ಚೀಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ.
ಡಿಸೆಂಬರ್ 04 ರಂದು ಅಲ್ಲು ಅರ್ಜುನ್ ಹೈದರಾಬಾದ್​ನ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಸಾವನ್ನಪ್ಪಿದ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯ ಸಾವಿಗೆ ಕಾರಣವಾದ ಕಾರಣ ಪೊಲೀಸರು ಅಲ್ಲು ಅರ್ಜುನ್ ಅನ್ನು ಬಂಧಿಸಿದ್ದು, ಅಲ್ಲು ಅರ್ಜುನ್ ಅನ್ನು ಸ್ಟೇಷನ್ ಬೇಲ್ ನೀಡಿ ಬಿಡುಗಡೆ ಮಾಡಲಾಗುತ್ತದೆ ಎಂಬ ನಿರೀಕ್ಷೆ ಇತ್ತು ಆದರೆ ಅದು ಸುಳ್ಳಾಗಿದೆ.

- Advertisement -

ಅಲ್ಲು ಅರ್ಜುನ್ ಬಂಧನದ ಬಗ್ಗೆ ಮಾತನಾಡಿರುವ ಹೈದರಾಬಾದ್ ಸಿಪಿ ಸಿವಿ ಆನಂದ್, ‘ಚಿಕ್ಕಡಪಲ್ಲಿ ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅನ್ನು ಬಂಧಿಸಲಾಗಿದೆ. ಸಂಧ್ಯಾ ಥಿಯೇಟರ್‌ ಗೆ ಅಲ್ಲು ಅರ್ಜುನ್ ಆಗಮಿಸಿದ್ದರಿಂದ ನೂಕುನುಗ್ಗಲು ಉಂಟಾಯಿತು ಅದೇ ಕಾರಣಕ್ಕೆ ಮಹಿಳೆಯ ಸಾವಾಗಿದೆ. ಇದೀಗ ಉಸ್ಮಾನಿಯಾ ಆಸ್ಪತ್ರೆಯಲ್ಲಿ ಅಲ್ಲು ಅರ್ಜುನ್‌ ಗೆ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದೇವೆ’ ಎಂದಿದ್ದಾರೆ.

ಆ ಮೂಲಕ ಅಲ್ಲು ಅರ್ಜುನ್ ಗೆ ಸ್ಟೇಷನ್ ಬೇಲ್ ನೀಡುವುದಿಲ್ಲ ಬದಲಿಗೆ ನ್ಯಾಯಾಂಗ ಬಂಧನಕ್ಕೆ ನೀಡುವುದನ್ನು ಪೊಲೀಸರು ಖಾತ್ರಿಪಡಿಸಿದ್ದಾರೆ. ಅಲ್ಲು ಅರ್ಜುನ್ ಅನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದಲ್ಲಿ ಕನಿಷ್ಟ 14 ದಿನಗಳ ಕಾಲ ಅವರು ಜೈಲು ವಾಸ ಅನುಭವಿಸಬೇಕಿರುತ್ತದೆ. ಆ ಬಳಿಕ ಜಾಮೀನಿಗೆ ಅವರು ಪ್ರಯತ್ನಿಸಬಹುದಾಗಿರುತ್ತದೆ. ಕೆಲವು ಪ್ರಕರಣದಲ್ಲಿ ಮೊದಲ ದಿನವೇ ಜಾಮೀನು ದೊರೆಯುವ ಸಾಧ್ಯತೆಯೂ ಇರುತ್ತದೆ. ಅಲ್ಲು ಅರ್ಜುನ್ ಪ್ರಕರಣದಲ್ಲಿ ಏನಾಗುತ್ತದೆ ಎಂಬುದು ಸಂಜೆ ವೇಳೆಗೆ ತಿಳಿದು ಬರಲಿದೆ.



Join Whatsapp