ನಟ ಸಲ್ಮಾನ್ ಖಾನ್ ನಿವಾಸದ ಹೊರಗಡೆ ಗುಂಡಿನ ದಾಳಿ ಪ್ರಕರಣ: 5ನೇ ಆರೋಪಿ ಬಂಧನ

Prasthutha|

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆಸಿದ ಶೂಟರ್ ಗಳಿಗೆ ಹಣಕಾಸಿನ ನೆರವು ನೀಡಿದ ಆರೋಪದ ಮೇಲೆ ರಾಜಸ್ಥಾನದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಸದಸ್ಯನನ್ನು ಮುಂಬೈ ಅಪರಾಧ ವಿಭಾಗ ಮಂಗಳವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -


ಆರೋಪಿಯನ್ನು ಮೊಹಮ್ಮದ್ ರಫೀಕ್ ಚೌಧರಿ (37) ಎಂದು ಗುರುತಿಸಲಾಗಿದೆ.


ಈತ ಗುಂಡಿನ ದಾಳಿ ಪ್ರಕರಣದಲ್ಲಿ ಬಂಧಿತರಾದ ಐದನೇ ವ್ಯಕ್ತಿಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಏಪ್ರಿಲ್ 14 ರಂದು ಮುಂಬೈನ ಬಾಂದ್ರಾ ಪ್ರದೇಶದ ಗ್ಯಾಲಕ್ಸಿ ಅಪಾರ್ಟ್ಮೆಂಟ್ನಲ್ಲಿರುವ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಬೈಕ್ ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದರು. ಈ ಪ್ರಕರಣದಲ್ಲಿ ಬಂಧಿತ ವ್ಯಕ್ತಿಗಳ ವಿಚಾರಣೆಯಲ್ಲಿ ಚೌಧರಿ ಪಾತ್ರ ಬೆಳಕಿಗೆ ಬಂದಿದೆ.

Join Whatsapp