ನಟ ಸೈಫ್ ಅಲಿ ಖಾನ್‌‌ಗೆ ಚಾಕು ಇರಿತ: ಮೂವರು ಶಂಕಿತರ ಬಂಧನ..!

Prasthutha|

- Advertisement -

ಮುಂಬೈ: ಖ್ಯಾತ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾದ ಕೆಲವೇ ಗಂಟೆಗಳಲ್ಲಿ ಮುಂಬೈ ಪೊಲೀಸರು ಮಿಂಚಿನ ಕಾರ್ಯಾಚಾರಣೆ ನಡೆಸಿ ಮೂವರು ಶಂಕಿತರನ್ನು ಬಂಧಿಸಿದ್ದಾರೆ.

ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಕೆಲವೇ ಹೊತ್ತಿನಲ್ಲಿ ನಟನ ನಿವಾಸಕ್ಕೆ ಆಗಮಿಸಿದ ಪೊಲೀಸರು ಪ್ರಕರಣದ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದರು. ಸೈಫ್ ಅಲಿ ಖಾನ್ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳ ಪತ್ತೆ ಹಲವು ತಂಡಗಳನ್ನು ರಚಿಸಿ ಮಿಂಚಿನ ಕಾರ್ಯಾಚರಣೆ ನಡೆಸಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ.

- Advertisement -

ಮಾಧ್ಯಮ ವರದಿಗಳ ಪ್ರಕಾರ, ಸೈಫ್ ಅಲಿಖಾನ್ ಹಾಗೂ ಕಳ್ಳನ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ನಿರಾಯುಧರಾಗಿದ್ದ ಸೈಫ್ ಅಲಿ ಖಾನ್ ಮೇಲೆ ದುಷ್ಕರ್ಮಿ ಹಲವು ಬಾರಿ ಚಾಕುವಿನಿಂದ ಇರಿದಿದ್ದಾನೆ. ಇದಾದ ನಂತರ ತಕ್ಷಣ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ. ಈ ಘಟನೆಯಿಂದಾಗಿ ಸೈಫ್ ಆರೋಗ್ಯದ ಬಗ್ಗೆ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರು ಚಿಂತಾಕ್ರಾಂತರಾಗಿದ್ದಾರೆ.



Join Whatsapp