ಹಾಸನ: ಸೂರ್ಯ ಹುಟ್ಟುವುದು ಒಂದೇ ಸಲ ಅಲ್ಲ, ಸೂರ್ಯ ಪ್ರಜ್ವಲಿಸುತ್ತಾನೆ. ನಿಮ್ಮ ಪ್ರಜ್ವಲ್ ಅಣ್ಣ, ಸೂರಜ್ ಅಣ್ಣನೂ ಅಷ್ಟೇ. ಈ ಜಿಲ್ಲೆಯ ಋಣ ತೀರಿಸುವ ಕೆಲಸ ಮಾಡೇ ಮಾಡುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಹೇಳಿದ್ದಾರೆ.
ತಮ್ಮ ಹುಟ್ಟುಹಬ್ಬದ ಅಂಗವಾಗಿ ಚನ್ನರಾಯಪಟ್ಟಣದಲ್ಲಿ ಬುಧವಾರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕೆಲವು ಅಧಿಕಾರಿಗಳು, ವಿರೋಧಿಗಳು ನಮ್ಮ ಕಾರ್ಯಕರ್ತರಿಗೆ ಯಾವ ರೀತಿ ತೊಂದರೆ ಕೊಡುತ್ತಿದ್ದಾರೆ ಎಂದು ನೋಡುತ್ತಿದ್ದೇವೆ. ಯಾವುದೂ ಶಾಶ್ವತವಲ್ಲ. ಯಾವ ಸರ್ಕಾರವೂ ಶಾಶ್ವತ ಅಲ್ಲ. ನಾನು, ನನ್ನಿಂದ ಮಾಡಿದ್ದು ಅಂತ ಹೇಳಿದವರು ಒಮ್ಮೆ ಸ್ಮಶಾನಕ್ಕೆ ಹೋಗಿ ಬನ್ನಿ. ಎಂತೆಂಥವರೋ ಏನೇನೋ ಆಗಿದ್ದಾರೆ ಅನ್ನೋದು ಗೊತ್ತಾಗುತ್ತದೆ. ನಾವು ಮಾಡುವ ಒಳ್ಳೆಯ ಕೆಲಸ ಮಾತ್ರ ಈ ಭೂಮಿ ಮೇಲೆ ಉಳಿಯುತ್ತದೆ. ಈ ದ್ವೇಷದ ರಾಜಕಾರಣ ಉಳಿಯಲ್ಲ ಎಂದರು.
ಕೆಲಸ ಮಾಡಲಿ, ಜನಕ್ಕೆ ಒಳ್ಳೆಯದು ಮಾಡಲಿ ಎಂದು ನಿಮಗೆ 135 ಸೀಟ್ ಕೊಟ್ಟಿದ್ದು. ಅದನ್ನು ಬಿಟ್ಟು ದಿನ ಬೆಳಗ್ಗೆಯಾದರೆ ರೇವಣ್ಣ ಅವರನ್ನು ಹೇಗೆ ತುಳಿಯೋದು, ದೇವೇಗೌಡರ ಕುಟುಂಬವನ್ನು ಹೇಗೆ ಮುಗಿಸೋದು ಬರೀ ಇದೇ ಆಗಿದೆ ಎಂದು ವಾಗ್ದಾಳಿ ನಡೆಸಿದರು.