ನಾನು ಮಾಡಿದ ತ್ಯಾಗಕ್ಕೆ ಜೆಡಿಎಸ್’ನಿಂದ ಬೆಲೆ ಸಿಗದಂತಾಯಿತು: ಸುಮಲತಾ

Prasthutha|

ಮಂಡ್ಯ: ತಾನು ಮಾಡಿದ ತ್ಯಾಗಕ್ಕೆ ಏನೂ ಬೆಲೆಯಿಲ್ಲದಂತಾಗಿದೆ, ಕುಮಾರಸ್ವಾಮಿಯವರು ಮನೆಗೆ ಬಂದು ಹೋದ ಮೇಲೆ ಒಂದೇ ಒಂದು ಸಲ ತನಗೆ ಫೋನ್ ಮಾಡಿಲ್ಲ ಎಂದು ಸುಮಲತಾ ಹೇಳಿದ್ದಾರೆ.

- Advertisement -


ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೊಡ್ಡರಸಿನಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತಗಟ್ಟೆಯಲ್ಲಿ ಮತದಾನ ಮಾಡಿದ ನಂತರ ಮಾತನಾಡಿದ ಅವರು, ಸುಮಲತಾ ಅಂಬರೀಶ್, ಚುನಾವಣೆಯಲ್ಲಿ ಸಹಕರಿಸಿಲ್ಲ ಎಂಬ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ದೇವೆಗೌಡರು ದೊಡ್ಡವರು, ಅವರಿಗೆ ಸರಿಯಾದ ಮಾಹಿತಿ ಕೊಡದೆ ಆ ರೀತಿ ಹೇಳಿದ್ದಾರೆ. ಅವರಿಂದ ಅಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ ಎಂದು ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದರು.


ಈ ದಿನದವರೆಗೂ ಜೆಡಿಎಸ್ನ ಯಾವ ನಾಯಕರು ಯಾವುದೇ ಸಭೆಗೆ ಆಹ್ವಾನಿಸಿಲ್ಲ. ಅವರು ಕರೆದು ನಾನು ಬರದೇ ಇದ್ದರೆ ತಪ್ಪಾಗುತ್ತದೆ. ಆದರೆ ಅವರು ನನ್ನ ಕರೆದಿಲ್ಲ, ನಾನಿಲ್ಲದೇ ಅವರು ಚುನಾವಣೆ ಮಾಡಿಕೊಳ್ಳುತ್ತೀವಿ ಎಂಬ ಭಾವನೆ ಇರಬಹುದು ಎಂದು ದಳಪತಿಗಳಿಗೆ ಸುಮಲತಾ ಅಂಬರೀಶ್ ಟಾಂಗ್ ಕೊಟ್ಟರು.

Join Whatsapp