ಜನವರಿ 28ರಿಂದ ಫೆಬ್ರವರಿ 5ರವರೆಗೆ 15ನೇ ವಿಧಾನಸಭೆಯ 9ನೇ ಅಧಿವೇಶನ ಸಮಾವೇಶಗೊಳ್ಳಲಿದ್ದು, ಗೋ ಹತ್ಯೆ ವಿಧೇಯಕ ಸೇರಿ 11 ವಿಧೇಯಕಗಳು ಮಂಡನೆಯಾಗಲಿವೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ನಾಳೆ ಬೆಳಿಗ್ಗೆ ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲ ವಜುಬಾಯಿ ವಾಲಾ ಭಾಷಣ ಮಾಡಲಿದ್ದಾರೆ. ಮೊದಲ ದಿನ ಅಗಲಿದ ಗಣ್ಯರಿಗೆ ಸಂತಾಪ ನಡೆಸಿ, ಜ.29 ರಿಂದ ಉಳಿದ ಕಾರ್ಯಕಲಾಪ ನಡೆಯಲಿವೆ ಎಂದು ಅವರು ತಿಳಿಸಿದರು.
ಈ ಬಾರಿ ನಗರಪಾಲಿಕೆಗಳ ಎರಡನೇ ತಿದ್ದುಪಡಿ ವಿಧೇಯಕ, ಗೋಹತ್ಯೆ ನಿಷೇಧ ಕಾಯಿದೆ ತೋಟಗಾರಿಕೆ ತಿದ್ದುಪಡಿ ವಿಧೇಯಕ, ಮೋಟಾರು ವಾಹನ ವಿಧೇಯಕ, ಲೋಕಾಯುಕ್ತ 3ನೇ ತಿದ್ದುಪಡಿ ವಿಧೇಯಕ ಸೇರಿದಂತೆ 11 ವಿಧೇಯಕಗಳು ಮಂಡನೆಯಾಗಲಿವೆ ಎಂದು ಸ್ಪೀಕರ್ ತಿಳಿಸಿದರು.
ಈ ಅಧಿವೇಶನದಲ್ಲಿಯೇ ಒಂದು ದಿನ “ಒಂದು ರಾಷ್ಟ್ರ-ಒಂದು ಚುನಾವಣೆ” ಕುರಿತು ಚರ್ಚೆಯಾಗಬೇಕಿದೆ. ಕಳೆದ ಬಾರಿಯೇ ಇದು ಚರ್ಚೆಗೆ ಬಂದಿತ್ತು. ಆದರೆ ಸಮಯದ ಅಭಾಯವದಿಂದ ಸಾಧ್ಯವಾಗಲಿಲ್ಲ. ಈ ಬಾರಿ ಇದನ್ನು ಚರ್ಚೆಗೆ ಎತ್ತುಕೊಳ್ಳುವ ಸಾಧ್ಯತೆಯಿದೆ ಎಂದು ಸಭಾಧ್ಯಕ್ಷ ಕಾಗೇರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಾಳೆಯಿಂದ ವಿಧಾನಮಂಡಲ ಅಧಿವೇಶನ; ಗೋ ಹತ್ಯೆ ನಿಷೇಧ ವಿಧೇಯಕ ಮಂಡನೆ
Prasthutha|