ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟಲು ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ವಿಧಿಸಿದ್ದ ನಿರ್ಬಂಧಗಳನ್ನು ಮೈಸೂರು ಜಿಲ್ಲೆ ಹೊರತುಪಡಿಸಿ ಇತರೆ ಜಿಲ್ಲೆಗಳಲ್ಲಿ ಸಡಿಲಿಸಿ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಶೇಕಡ 50 ರಷ್ಟು ಆಸನ ಸಾಮರ್ಥ್ಯದೊಂದಿಗೆ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲು ಅನುಮತಿಸಲಾಗಿರುತ್ತದೆ. ಅದರಂತೆ, ಕರಾರಸಾ ನಿಗಮವು ಜೂನ್ 21ರಿಂದ ಜಾರಿಗೆ ಬರುವಂತೆ ಮೈಸೂರು ಜಿಲ್ಲೆ ಹೊರತುಪಡಿಸಿ ಇತರೆ ಜಿಲ್ಲೆಗಳಲ್ಲಿ ಪ್ರಯಾಣಿಕರ ಜನದಟ್ಟಣೆ ಹಾಗೂ ಅವಶ್ಯಕತೆಗೆ ಅನುಗುಣವಾಗಿ ಸ್ಥಳೀಯ ಮತ್ತು ದೂರ ಮಾರ್ಗದ ಅಂತರ ಜಿಲ್ಲಾ ಸಾರಿಗೆಯ ಕಾರ್ಯಾಚರಣೆಯನ್ನು ಪ್ರಾರಂಭಿಸುತ್ತಿದೆ. ಪ್ರಾರಂಭಿಕವಾಗಿ ಸುಮಾರು 3000 ಬಸ್ಸುಗಳನ್ನು ಕಾರ್ಯಾಚರಿಸಲು ಯೋಜಿಸಲಾಗಿದೆ.
ಅಂತರರಾಜ್ಯ ಮಾರ್ಗಗಳ ಕಾರ್ಯಾಚರಣೆಯ ಬಗ್ಗೆ ಆಯಾ ರಾಜ್ಯಗಳ ಮಾರ್ಗಸೂಚಿಗಳನ್ವಯ ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು. ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಕೋರಲಾಗಿದೆ ಎಂದು ಕೆಎಸ್ ಆರ್ ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.