ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆಯ ಬಂಡಾಯ ಶಾಸಕರಿಗೆ ಶಿವಸೇನೆ ಮುಖಂಡ ಸಂಜಯ್ ರಾವತ್ ಅವರು ‘ಪಕ್ಷದ ಬಾಗಿಲು ನಿಮಗಾಗಿ ತೆರೆದಿದೆ’ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾವತ್ ‘ಯಾಕೆ ದಿಕ್ಕುದೆಸೆಯಿಲ್ಲದೆ ಅಲೆದಾಡುತ್ತಿದ್ದೀರಿ? ನಿಮಗಾಗಿ ಪಕ್ಷದ ಬಾಗಿಲು ಸದಾ ತೆರೆದಿರುತ್ತದೆ. ಮಾತುಕತೆ ಮೂಲಕ ಸೌಹಾರ್ದಯುತವಾಗಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳೋಣ. ಗುಲಾಮಗಿರಿಯನ್ನು ಒಪ್ಪಿಕೊಳ್ಳುವ ಬದಲು ಸ್ವಾಭಿಮಾನದಿಂದ ನಿರ್ಧಾರ ತೆಗೆದುಕೊಳ್ಳೋಣ’ ಎಂದಿದ್ದಾರೆ.
ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರು 37 ಪಕ್ಷದ ಶಾಸಕರು ಮತ್ತು ಹತ್ತು ಸ್ವತಂತ್ರ ಶಾಸಕರೊಂದಿಗೆ ಗುವಾಹಟಿಯಲ್ಲಿ ಬೀಡುಬಿಟ್ಟಿದ್ದು, ಇದು ಮಹಾರಾಷ್ಟ್ರದ ಶಿವಸೇನಾ-ಎನ್‌ಸಿಪಿ-ಕಾಂಗ್ರೆಸ್ ಸರ್ಕಾರವನ್ನು ಬಿಕ್ಕಟ್ಟಿನಲ್ಲಿ ಮುಳುಗಿಸಿದೆ.