ಪಕ್ಷದ ಮಹಿಳಾ ಪದಾಧಿಕಾರಿಯ ಮೇಲೆ ಅತ್ಯಾಚಾರ; ಬಿಜೆಪಿ ಶಾಸಕನ ವಿರುದ್ಧ ರೇಪ್ ಕೇಸ್

Prasthutha|

ಡೆಹ್ರಾಡೂನ್: ಉತ್ತರಾಖಂಡದ ಬಿಜೆಪಿ ಶಾಸಕ ಸುರೇಶ್ ರಾಥೋಡ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ತನ್ನ ಪಕ್ಷದ ಮಹಿಳಾ ಪದಾಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಜ್ವಾಲಪುರ ಕ್ಷೇತ್ರದ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

- Advertisement -

ಶಾಸಕನ ವಿರುದ್ಧ ಕೇಸ್ ದಾಖಲಿಸುವಂತೆ ಅಧೀನ ನ್ಯಾಯಾಲಯ ಗುರುವಾರ ಆದೇಶ ನೀಡಿದ ಬಳಿಕ ತಡರಾತ್ರಿ ಬಹಾದರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಇದು ಎರಡನೇ ಬಿಜೆಪಿ ಶಾಸಕನ ವಿರುದ್ದ ದಾಖಲಾಗುತ್ತಿರುವ ಅತ್ಯಾಚಾರ ಪ್ರಕರಣವಾಗಿದೆ. ಕೆಲ ದಿನಗಳ ಹಿಂದೆ ದ್ವಾರ್ ಹಾತ್ ಕ್ಷೇತ್ರದ ಶಾಸಕ ಮಹೇಶ್ ನೇಗಿ ವಿರುದ್ಧವೂ ಅತ್ಯಾಚಾರ ಪ್ರಕರಣ ದಾಖಲಾಗಿತ್ತು.

Join Whatsapp