ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ: 20 ಮಂದಿ ಸಾವು, 200ಕ್ಕೂ ಅಧಿಕ ಮಂದಿಗೆ ಗಾಯ

Prasthutha|

ಕ್ವೆಟ್ಟಾ: ದಕ್ಷಿಣ ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ ಕನಿಷ್ಠ 20 ಮಂದಿ ಸಾವನ್ನಪ್ಪಿ, 200ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಹಾ ನಿರ್ದೇಶಕ ನಸೀರ್ ನಾಸಿರ್ ತಿಳಿಸಿದ್ದಾರೆ.

- Advertisement -

ಜನರು ನಿದ್ರೆಯಲ್ಲಿದ್ದಾಗ ಗುರುವಾರ ಮುಂಜಾನೆ 5.7ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದೆ. ಸಾವನ್ನಪ್ಪಿದವರಲ್ಲಿ ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳಾಗಿದ್ದಾರೆ ಎಂದು ರಕ್ಷಣಾ ಕಾರ್ಯಕರ್ತರು ತಿಳಿಸಿದ್ದಾರೆ.

ಸರ್ಕಾರಿ ಕಟ್ಟಡಗಳು ಸೇರಿದಂತೆ 100 ಕ್ಕೂ ಅಧಿಕ ಮನೆಗಳು ಕುಸಿದಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಹಾನಿಯಾಗಿದೆ. ನೂರಾರು ಜನರು ನಿರಾಶ್ರಿತರಾಗಿದ್ದಾರೆ ಎಂದು ಹರ್ನಾಯ್ ನಗರದ ಉಪ ಆಯುಕ್ತ ಸೊಹೈಲ್ ಅನ್ವರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

- Advertisement -

1937 ರಲ್ಲಿ 7.7-ತೀವ್ರತೆಯ ಭೂಕಂಪವು ಕ್ವೆಟ್ಟಾದಲ್ಲಿ ಸಂಭವಿಸಿತ್ತು. 30,000 ರಿಂದ 60,000 ಜನರು ಸಾವನ್ನಪ್ಪಿದರು. ಇದು ಇತಿಹಾಸದಲ್ಲಿ ದಕ್ಷಿಣ ಏಷ್ಯಾದಲ್ಲಿ ಸಂಭವಿಸಿದ ಅತ್ಯಂತ ಭೀಕರ ಭೂಕಂಪಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ.

Join Whatsapp