ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

Prasthutha|

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕಾನೂನು ಹೋರಾಟದಲ್ಲಿ ಮತ್ತೆ ಹಿನ್ನಡೆಯಾದಂತಾಗಿದೆ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.

- Advertisement -

ಮೊದಲ ಪ್ರಕರಣದಲ್ಲಿ ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಮನೆಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾದ ಪ್ರಕರಣ ಪ್ರಕರಣಕ್ಕೆ ಸಂಬಂಧಿಸಿ ಪ್ರಜ್ವಲ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

ಸದ್ಯ ಪ್ರಜ್ವಲ್ ರೇವಣ್ಣ ಎಸ್‌ಐಟಿ ವಶದಲ್ಲಿದ್ದಾರೆ.

Join Whatsapp