ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ರದ್ದು ಮಾಡುವಂತೆ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

Prasthutha|

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

- Advertisement -

‘ಪ್ರಜ್ವಲ್ ಅವರು ಆರೋಪಿಯಾಗಿರುವ ಪ್ರಕರಣದ ಕುರಿತು ತಮ್ಮ ಗಮನ ಸೆಳೆಯಲು ಮತ್ತೊಮ್ಮೆ ಪತ್ರ ಬರೆಯುತ್ತಿದ್ದೇನೆ. ಈ ಪ್ರಕರಣವು ರಾಜ್ಯದ ಜನರ ಆತ್ಮಸಾಕ್ಷಿಯನ್ನು ಘಾಸಿಗೊಳಿಸಿರುವುದಷ್ಟೇ ಅಲ್ಲದೆ, ದೇಶದಾದ್ಯಂತ ಕಳವಳಕ್ಕೆ ಕಾರಣವಾಗಿದೆ’ ಎಂದು ಸಿಎಂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
‘ಸಂಸದ ಪ್ರಜ್ವಲ್ ಅವರು ತಮ್ಮ ವಿರುದ್ಧ ಎಫ್ಐಆರ್ ದಾಖಲಾಗುವ ಕೆಲವೇ ಗಂಟೆಗಳ ಮೊದಲು 2024ರ ಏಪ್ರಿಲ್ 27ರಂದು ರಾಜತಾಂತ್ರಿಕ ಪಾಸ್ಪೋರ್ಟ್ ಬಳಸಿ ದೇಶ ತೊರೆದು ಜರ್ಮನಿಗೆ ಓಡಿಹೋಗಿರುವುದು ನಾಚಿಕೆಗೇಡಿನ ಸಂಗತಿ’ ಎಂದು ಹೇಳಿದ್ದಾರೆ.


‘ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಹಾಗೂ ತ್ವರಿತ ಮತ್ತು ಸಂಘಟಿತ ಕ್ರಮಗಳನ್ನು ಕೈಗೊಂಡು ಪ್ರಜ್ವಲ್ ಅವರ ಪಾಸ್ಪೋರ್ಟ್ ರದ್ದುಗೊಳಿಸಬೇಕು ಎಂದು ಒತ್ತಾಯಿಸುತ್ತೇನೆ’ ಎಂದು ಮನವಿ ಮಾಡಿದ್ದಾರೆ.

Join Whatsapp
Exit mobile version