ಫೆಬ್ರವರಿ 23ರಂದು ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆ ಆರಂಭ

Prasthutha|

ಬೆಂಗಳೂರು: ರಾಜ್ಯದ ಎಲ್ಲ ಪ್ರೌಢ ಶಾಲೆಗಳಲ್ಲೂ ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಗಳನ್ನು ಫೆ.23ರಿಂದ ಮಾರ್ಚ್ 1ರವರೆಗೆ ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚಿಸಿದೆ.

- Advertisement -

ವೇಳಾಪಟ್ಟಿ ಬಿಡುಗಡೆ:

ಫೆ.23ರಂದು ಪ್ರಥಮ ಭಾಷಾ ವಿಷಯಗಳಾದ ಕನ್ನಡ, ಇಂಗ್ಲಿಷ್, ಉರ್ದು, ತೆಲುಗು, ಹಿಂದಿ, ಮರಾಠಿ, ಸಂಸ್ಕೃತ,. ತಮಿಳು,   24ರಂದು ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ, 25ರಂದು ತೃತೀಯ ಭಾಷಾ ವಿಷಯಗಳು, 27ರಂದು ಗಣಿತ, 28ರಂದು ವಿಜ್ಞಾನ ಮತ್ತು ಮಾರ್ಚ್ 1ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ. ಪ್ರತಿದಿನ ಬೆಳಿಗ್ಗೆ ಗಂಟೆ 10.30ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆಗಳನ್ನು ನಡೆಸಬೇಕು. ಜೆಟಿಎಸ್ ಸೇರಿದಂತೆ ಪರ್ಯಾಯ ವಿಷಯಗಳಿಗೆ ಶಾಲಾ ಹಂತದಲ್ಲೇ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿಕೊಂಡು ಪರೀಕ್ಷೆಗಳನ್ನು ನಡೆಸಲು ಮುಖ್ಯ ಶಿಕ್ಷಕರು ಕ್ರಮ ಕೈಗೊಳ್ಳಬೇಕು ಎಂದು ಮಂಡಳಿ ನಿರ್ದೇಶಕರು ಸೂಚಿಸಿದ್ದಾರೆ.

Join Whatsapp