Home ಟಾಪ್ ಸುದ್ದಿಗಳು ಬಳ್ಳಾರಿ ಬಾಣಂತಿಯರ ಸಾವಿಗೆ ಔಷಧ ಮಾತ್ರ ಕಾರಣವಲ್ಲ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ

ಬಳ್ಳಾರಿ ಬಾಣಂತಿಯರ ಸಾವಿಗೆ ಔಷಧ ಮಾತ್ರ ಕಾರಣವಲ್ಲ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ

ಬಳ್ಳಾರಿ: ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿಗೆ ಕೇವಲ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣವಲ್ಲ, ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿನ ಅಸ್ವಚ್ಛತೆ ಕೂಡ ಕಾರಣವಾಗಿರಬಹುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅನುಮಾನ ವ್ಯಕ್ತಪಡಿಸಿದ್ದಾರೆ.


ಕರ್ನಾಟಕ ರಾಜ್ಯ ಮಹಿಳಾ ಆಯೋದ ಅಧ್ಯಕ್ಷ ಡಾ. ನಾಗಲಕ್ಷ್ಮೀ ಚೌದರಿ ಅವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯಲ್ಲಿನ ಹೆರಿಗೆ ವಾರ್ಡ್, ಶಸ್ತ್ರಚಿಕಿತ್ಸಾ ಕೊಠಡಿ, ಆಸ್ಪತ್ರೆಗೆ ಸರಬರಾಜು ಆಗುವ ನೀರಿನ ಟ್ಯಾಂಕ್ ಗಳನ್ನು ಪರಿಶೀಲನೆ ನಡೆಸಿದರು.


ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಾಣಂತಿಯರ ಸಾವಿಗೆ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣವಲ್ಲ. ಹೆರಿಗೆಯಾದ ಶಸ್ತ್ರಚಿಕಿತ್ಸಾ ಕೊಠಡಿ ಕೂಡ ಕಾರಣವಾಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದರು.

Join Whatsapp
Exit mobile version