ಬಾಬಾ ಸಿದ್ದಿಕಿ ಹತ್ಯೆ ಕೇಸ್‌: 4,590 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ ಮುಂಬೈ ಪೊಲೀಸ್

Prasthutha|

- Advertisement -

ಮುಂಬೈ: ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಸಂಬಂಧ ಮುಂಬೈ ಪೊಲೀಸರ ತನಿಖಾ ತಂಡ ವಿಶೇಷ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ ನ್ಯಾಯಾಲಯಕ್ಕೆ ಸೋಮವಾರ 4,590 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದೆ.

ತನಿಖೆ ಪೂರ್ಣಗೊಳಿಸಿದ ಮುಂಬೈ ಪೊಲೀಸರ ತಂಡ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯ್‌, ಆತನ ಸಹೋದರ ಅನ್ಮೋಲ್‌ ಬಿಷ್ಣೋಯ್‌ ಸೇರಿದಂತೆ ಒಟ್ಟು 26 ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ.

- Advertisement -

ಶುಭಂ ಲೋಂಕರ್, ಯಾಸಿನ್ ಸಿದ್ದಿಕ್ ಮತ್ತು ಅನ್ಮೋಲ್ ಬಿಷ್ಣೋಯ್ ಪ್ರಕರಣದ ಮಾಸ್ಟರ್‌ ಮೈಂಡ್‌ಗಳೆಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಮುಂಬೈನಲ್ಲಿ ತಮ್ಮ ಪ್ರಾಬಲ್ಯ ಸ್ಥಾಪಿಸಲು ಬಿಷ್ಣೋಯ್ ಗ್ಯಾಂಗ್ ಹತ್ಯೆಗೆ ಸಂಚು ರೂಪಿಸಿತ್ತು ಎಂದು ಹೇಳಲಾಗಿದೆ.



Join Whatsapp