ಸೂರತ್: ಬಿಜೆಪಿಯೇತರ ಇತರ ಪಕ್ಷಗಳಿಗೆ ದೇಣಿಗೆ ನೀಡಲು ಬಯಸುವವರಿಗೆ, ಬಿಜೆಪಿಯು ನೀಡದಂತೆ ಬೆದರಿಕೆ ಒಡ್ಡುತ್ತಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗಂಭೀರ ಆರೋಪ ಮಾಡಿದ್ದಾರೆ.
ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿಯಲ್ಲಿರುವ ಬಿಜೆಪಿಯು ಮಿತಿಮೀರಿದ ಸರ್ವಾಧಿಕಾರ ಮನೋಭಾವ ತೋರುತ್ತಿದ್ದು, ಬಿಜೆಪಿಯಲ್ಲದೆ ಇನ್ನಿತರ ರಾಜಕೀಯ ಪಕ್ಷಗಳಿಗೆ ದೇಣಿಗೆಯ ಕೊಡುಗೆಯನ್ನು ನೀಡಲು ಬಯಸುವ ಕಾರ್ಪೊರೇಟ್ ಸಂಸ್ಥೆಗಳಿಗೆ ಬಿಜೆಪಿಯು ತಡೆಯೊಡ್ಡುತ್ತಿದೆ ಎಂದು ಅವರು ಹೇಳಿದ್ದಾರೆ.
ಈ ಭೀತಿಯ ಕಾರಣದಿಂದ ಚುನಾವಣಾ ಬಾಂಡ್‌ಗಳ ಮೂಲಕ ಶೇ 95ರಷ್ಟು ದೇಣಿಗೆ ಬಿಜೆಪಿಗೇ ಹೋಗುತ್ತಿದೆ ಎಂದು ಭಾಸವಾಗುತ್ತಿದೆ ಎಂದೂ ಅವರು ಹೇಳಿದ್ದಾರೆ.
ಗುಜರಾತ್ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ಗೆಹ್ಲೋಟ್, ಸುದ್ದಿಗೋಷ್ಠಿಯಲ್ಲಿ ಈ ಬಗೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.