ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಮದ್ಯಪಾನ ನಿಷೇಧಿಸಬೇಕು : ಉಮಾ ಭಾರತಿ

Prasthutha|

- Advertisement -

ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಮದ್ಯಪಾನ ನಿಷೇಧಿಸುವಂತೆ ಉಮಾ ಭಾರತಿ ಬಿಜೆಪಿ ರಾಷ್ಟ್ರಾಧ್ಯಕ್ಷರನ್ನು ಒತ್ತಾಯಿಸಿದ್ದಾರೆ.ಮಧ್ಯಪ್ರದೇಶದಲ್ಲಿ ಬಾರ್‌ಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂಬ ವರದಿಗೆ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಉಮಾ ಭಾರತಿ ಸತತ ಎಂಟು ಟ್ವೀಟ್‌ಗಳಲ್ಲಿ ಈ ಸಲಹೆಯನ್ನು ನೀಡಿದ್ದಾರೆ.

ಮದ್ಯಪಾನ ನಿಷೇಧವು ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರು ಗೆಲುವು ಸಾಧಿಸಲು ಸಹಾಯ ಮಾಡಿದೆ ಎಂದು ಉಮಾ ಭಾರತಿ ಹೇಳಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಮದ್ಯಪಾನ ನಿಷೇಧಿಸಲಾಗಿತ್ತು. ಕೊರೋನಾದಿಂದ ಸಾವು ಸಂಭವಿಸುತ್ತದೆ, ಆದರೆ ಮದ್ಯಪಾನ ಲಭಿಸದ ಕಾರಣ ಯಾರೂ ಸಾಯುವುದಿಲ್ಲ ಎಂದು ಈ ಕ್ರಮವು ಜನರಿಗೆ ಕಲಿಸಿಕೊಟ್ಟಿದೆ ಎಂದು ಅವರು ಹೇಳಿದ್ದಾರೆ.

- Advertisement -

ಆಡಳಿತಾತ್ಮಕ ವ್ಯವಸ್ಥೆಗಳು ಬಾರ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ನಿರ್ಧರಿಸುವುದು ‘ತಾಯಿಯೇ ಮಗುವಿಗೆ ವಿಷ ನೀಡುವುದಕ್ಕೆ ಸಮಾನವಾಗಿದೆ’ಎಂದು ಉಮಾ ಭಾರತಿ ಟ್ವೀಟ್ ಮಾಡಿದ್ದಾರೆ. ಮದ್ಯಪಾನಗಳಿಂದಾಗಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳು ಜಾಸ್ತಿಯಾಗುತ್ತಿದೆ. ಆದ್ದರಿಂದ ತೆರಿಗೆ ಹೆಚ್ಚಿಸಲು ಸರಕಾರವು ಮದ್ಯಪಾನ ರಹಿತ ವಿಧಾನಗಳನ್ನು ಬಳಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.



Join Whatsapp