ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ; ಎಚ್.ಡಿ.ಕುಮಾರಸ್ವಾಮಿ

Prasthutha|

ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ (ಪ್ರೈಡ್) ಸಂಸ್ಥೆ ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು, ತೆಲುಗಿಗೆ ಆದ್ಯತೆ ನೀಡಿದೆ. ಕನ್ನಡಭಿಮಾನವಿಲ್ಲದ 25 ಮಂದಿಯನ್ನು ಲೋಕಸಭೆಗೆ ಆರಿಸಿ ಕಳಿಸಿದ್ದರ ಫಲವಿದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -

ಕೇಂದ್ರ ಸರ್ಕಾರ ಕನ್ನಡದ ವಿಚಾರದಲ್ಲಿ ನಿರ್ಲಕ್ಷ್ಯ ಭಾವ ತಳೆದಿದ್ದರೂ ಬಿಜೆಪಿಯ ಯಾವೊಬ್ಬ ಸಂಸದರೂ ಇದರ ಬಗ್ಗೆ ಮಾತನಾಡಿರುವುದನ್ನು ನಾನಂತೂ ನೋಡಿಲ್ಲ. ಇಷ್ಟರಲ್ಲೇ ಜನರಿಗೆ ಅರ್ಥವಾಗಬೇಕು “ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ” ಎಂದು. ತಾವು ಕನ್ನಡ ವಿರೋಧಿಗಳಲ್ಲ ಎಂದಾದರೆ ಈಗ ಆಗಿರುವ ಪ್ರಮಾದವನ್ನು ತಾಕತ್ತಿದ್ದರೆ ಬಿಜೆಪಿ ಸರಿಪಡಿಸಲಿ ಎಂದು ಸವಾಲು ಹಾಕಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೇಂದ್ರ ಪ್ರತಿ ಬಾರಿ ಕನ್ನಡ ನಿರ್ಲಕ್ಷಿಸುತ್ತಿದೆ. ಇದರ ವಿರುದ್ಧ ನಾವೇ ಕೆಲವರು ಮಾತನಾಡುವಂತಾಗಿದೆ. ಕನ್ನಡ ಭಾಷೆ ವಿಚಾರದಲ್ಲಿನ ಕೇಂದ್ರದ ಇಂಥ ನಡವಳಿಕೆಗಳ ವಿರುದ್ಧ ಎಲ್ಲರೂ ಹೋರಾಡಬೇಕು. ಅವರು ನಿರ್ಲಕ್ಷಿಸುವುದು ನಾವು ಎಚ್ಚರಿಸುವುದು, ಅತ್ತು ಕರೆದು ಔತಣ ಪಡೆಯುವುದು ನಿಲ್ಲಬೇಕು. ‘ಕನ್ನಡ ಮರೆತರೆ ಕಷ್ಟ‘ ಎಂಬ ಸಂದೇಶ ರವಾನಿಸಬೇಕು ಎಂದು ಹೇಳಿದ್ದಾರೆ.

- Advertisement -


Join Whatsapp