ಬಿಜೆಪಿ ಸೇರಿದ ಪುದುಚೇರಿಯ ಕಾಂಗ್ರೆಸ್ ಶಾಸಕನಿಗೆ ಬೀದಿಯಲ್ಲಿ ಹಲ್ಲೆ ನಡೆಸಲಾಯಿತೇ? ಸತ್ಯಾಸತ್ಯತೆಯೇನು ?

Prasthutha|

- Advertisement -

ಪುದುಚೇರಿಯಲ್ಲಿ ಐದು ಮಂದಿ ಕಾಂಗ್ರೆಸ್ ಶಾಸಕರು ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡ ಕಾರಣದಿಂದ ಈ ಬಾರಿ ಪುದುಚೇರಿಯಲ್ಲಿ ಕಾಂಗ್ರೆಸ್ ಸರಕಾರ ಉರುಳಿ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ಈ ಹಿನ್ನಲೆಯಲ್ಲಿ ಪಕ್ಷ ತೊರೆದ ಕಾಂಗ್ರೆಸ್ ಶಾಸಕನೊಬ್ಬನಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಎಂಬ ಶೀರ್ಷಿಕೆಯೊಂದಿಗೆ ಸಾರ್ವಜನಿಕರು ಮತ್ತು ಪೊಲೀಸರು ಇರುವ ಚಿತ್ರವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ. ಆ ಮೂಲಕ ಬಿಜೆಪಿಗೆ ಸೇರಿದ ಕಾಂಗ್ರೆಸ್ ಶಾಸಕನೋರ್ವನಿಗೆ ಕಾಂಗ್ರೆಸ್ ಕಾರ್ಯಕರ್ತರು ಬೀದಿಯಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಬಿಂಬಿಸುವ ಪ್ರಯತ್ನ ನಡೆದಿತ್ತು.

ಟ್ವೀಟ್ ನಲ್ಲಿ ಹಂಚಿಕೆಯಾಗುತ್ತಿರುವ ಈ ಘಟನೆ ವಾಸ್ತವದಲ್ಲಿ ಸತ್ಯಕ್ಕೆ ದೂರವಾಗಿದೆ. ಇಂತಹ ಯಾವುದೇ ಪ್ರಕರಣಗಳು ಪುದಿಚೇರಿಯಲ್ಲಿ ನಡೆದಿಲ್ಲ ಎಂದು ಮಾಧ್ಯಮಗಳು ಸ್ಪಷ್ಟಪಡಿಸಿದೆ. ಮಾತ್ರವಲ್ಲ ವೈರಲ್ ಆಗುತ್ತಿರುವ ಚಿತ್ರವು 2018 ರದ್ದು ಎಂದು ದೃಢೀಕರಿಸಿದೆ.

- Advertisement -

ಈ ಬಗ್ಗೆ ಮೊದಲನೆಯಾದಾಗಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಪಿಡಬ್ಲ್ಯುಡಿ ಸಚಿವ ಎ ನಮಶಿವಯಂ ರವರು ಮಾಧ್ಯಮಗಳೊಂದಿಗೆ ಮಾತನಾಡಿ “ನನ್ನ ಶಾಸಕ ಹುದ್ದೆಗೆ ರಾಜೀನಾಮೆ ನೀಡಿದ ನಂತರ ನಾನು ಬಿಜೆಪಿಗೆ ಸೇರಿಕೊಂಡೆ. ಆದರೆ ಈ ಸೋಷಿಯಲ್ ಮೀಡಿಯಾ ಪೋಸ್ಟ್ ಗಳಲ್ಲಿ ಹೇಳಿಕೊಂಡಂತೆ ನಾನು ಅಥವಾ ಬಿಜೆಪಿಗೆ ಸೇರಿದ ಕಾಂಗ್ರೆಸ್ ನ ಇತರ ಶಾಸಕರ ಯಾರ ಮೇಲೂ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ನಡೆದಿಲ್ಲ. ಈ ರೀತಿಯ ಯಾವುದೇ ಘಟನೆ ನನ್ನ ಗಮನಕ್ಕೆ ಬಂದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

Join Whatsapp