‘ಬಿಪಿಎಲ್ ಕಾರ್ಡ್’ದಾರರಿಗೆ ಸಿಹಿ ಸುದ್ದಿ : ಎಪ್ರಿಲ್ 1ರಿಂದ ಏನೆಲ್ಲಾ ಸಿಗಲಿದೆ? ಇಲ್ಲಿದೆ ವಿವರ

Prasthutha|

- Advertisement -

ಬೆಳಗಾವಿ : ರಾಜ್ಯದ ಬಿಪಿಎಲ್ ಪಡಿತರದಾರರಿಗೆ ಆಹಾರ ಭದ್ರತೆ ಯೋಜನೆಯಡಿ ಅಕ್ಕಿಯ ಜೊತೆಗೆ ಜೋಳ, ಹೆಸರುಬೇಳೆ, ತೊಗರಿ ಹಾಗೂ ರಾಗಿ ವಿತರಿಸಲಾಗುತ್ತದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ. “ಆಹಾರ ಭದ್ರತೆ ಯೋಜನೆಯ ಅಡಿಯಲ್ಲಿ ಬಿಪಿಎಲ್ ಕಾರ್ಡ್ ದಾರರಿಗೆ 5 ಕೆಜಿ ಅಕ್ಕಿ ಜೊತೆಗೆ, ಇತರೆ ಧಾನ್ಯ ವಿತರಿಸುವಂತ ಯೋಜನೆ ಇದೆ. ಹೀಗಾಗಿ ಉತ್ತರ ಕರ್ನಾಟಕ ಭಾಗದವರಿಗೆ ಅಕ್ಕಿಯ ಜೊತೆಗೆ ಜೋಳ, ತೊಗಲಿ, ಹೆಸರುಬೇಳೆ ವಿತರಿಸಲಾಗುತ್ತದೆ ಎಂದು ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದ್ದಾರೆ.


ಇನ್ನೂ ಉತ್ತರ ಕರ್ನಾಟಕ ಭಾಗದವರಿಗೆ ಅಕ್ಕಿ ಜೊತೆಗೆ ಜೋಳ, ತೊಗರಿ ಹೆಸರು ಬೇಳೆ ವಿತರಿಸಿ, ದಕ್ಷಿಣ ಕರ್ನಾಟಕ ಭಾಗದವರಿಗೆ ಅಕ್ಕಿಯ ಜೊತೆಗೆ ರಾಗಿ, ಹೆಸರು, ತೊಗರಿ ವಿತರಿಸಬೇಕು ಎಂಬ ಯೋಜನೆ ಹಾಕಿದ್ದೇವೆ. ಏಪ್ರಿಲ್ 1ರಿಂದ ಈ ಯೋಜನೆ ಜಾರಿಗೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ.

Join Whatsapp