Home ಟಾಪ್ ಸುದ್ದಿಗಳು ಬಿಹಾರ | BPSC ಪರೀಕ್ಷೆ ರದ್ದುಗೊಳಿಸುವಂತೆ ಒತ್ತಾಯ: ಪ್ರತಿಭಟನಕಾರರ ಮೇಲೆ ಲಾಠಿ ಪ್ರಹಾರ

ಬಿಹಾರ | BPSC ಪರೀಕ್ಷೆ ರದ್ದುಗೊಳಿಸುವಂತೆ ಒತ್ತಾಯ: ಪ್ರತಿಭಟನಕಾರರ ಮೇಲೆ ಲಾಠಿ ಪ್ರಹಾರ

ಪಟ್ನಾ: ಡಿಸೆಂಬರ್ 13ರಂದು ನಡೆದ ಬಿಹಾರ ಲೋಕಸೇವಾ ಆಯೋಗದ (ಬಿಪಿಎಸ್‌ ಸಿ) ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದವರನ್ನು ಪೊಲೀಸರು ಜಲಫಿರಂಗಿ ಮತ್ತು ಲಾಠಿ ಪ್ರಹಾರದ ಮೂಲಕ ಚದುರಿಸಿದರು.

‘ಜನ್‌ ಸುರಾಜ್‌ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್‌ ಅವರೊಂದಿಗೆ ಇಲ್ಲಿನ ಗಾಂಧಿ ಮೈದಾನದಲ್ಲಿ ಬೆಳಿಗ್ಗೆ ಸೇರಿದ ಪ್ರತಿಭಟನಕಾರರು ಸಂಜೆಯ ವೇಳೆ, ಮುಖ್ಯಮಂತ್ರಿ ಅವರ ನಿವಾಸದ ಕಡೆಗೆ ಮೆರವಣಿಗೆ ನಡೆಸಲು ಪ್ರಯತ್ನಿಸಿದರು. ಇದರಿಂದ ಅವರನ್ನು ಚದುರಿಸಲು ಪೊಲೀಸರು ಬಲ ಪ್ರಯೋಗಿಸಬೇಕಾಯಿತು’ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ್‌ ಸಿಂಗ್‌ ತಿಳಿಸಿದರು.

ಪ್ರತಿಭಟನಕಾರರು ಗಾಂಧಿ ಮೈದಾನದಿಂದ ಮುಖ್ಯಮಂತ್ರಿ ನಿವಾಸದ ಕಡೆಗೆ ಮೆರವಣಿಗೆ ಮಾಡುವಾಗ ಬ್ಯಾರಿಕೇಡ್‌ಗಳನ್ನು ದಾಟಲು ಪ್ರಯತ್ನಿಸಿದರು ಎಂದು ಅವರು ಹೇಳಿದರು.

Join Whatsapp
Exit mobile version