ಬೆಂಗಳೂರು – ಕಾರವಾರ ರೈಲಿಗೆ ‘ಪಂಚಗಂಗಾ ಎಕ್ಸ್ ಪ್ರೆಸ್’ ಎಂದು ನಾಮಕರಣ

Prasthutha|

ಕುಂದಾಪುರ: ಬೆಂಗಳೂರು ಹಾಗೂ ಕಾರವಾರ ನಡುವೆ ಸಂಚರಿಸುವ ರೈಲಿಗೆ ಪಂಚಗಂಗಾ ಎಕ್ಸ್ ಪ್ರೆಸ್ ಎಂದು ನಾಮಕರಣ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದ್ದು, ಕಾರವಾರ-ಬೆಂಗಳೂರು ವಯಾ ಪಡೀಲ್ ಬೈಪಾಸ್ ಸೂಪರ್ ಫಾಸ್ಟ್ ರೈಲಿಗೆ ಪಂಚಗಂಗಾ ಎಕ್ಸ್ ಪ್ರೆಸ್ ಎಂಬ ಹೆಸರಿಡುವುದಾಗಿ ತಿಳಿಸಿದೆ.

- Advertisement -


ಉಡುಪಿ ಜಿಲ್ಲೆಯ 5 ಪ್ರಮುಖ ಪುಣ್ಯ ನದಿಗಳು ಸಂಗಮಿಸಿ ಸೃಷ್ಟಿಯಾಗುವ ಪಂಚಗಂಗಾವಳಿ ನದಿಯ ಹೆಸರನ್ನು ಆಧರಿಸಿ ಪಂಚಗಂಗಾ ಎಕ್ಸ್ ಪ್ರೆಸ್ ಎಂಬ ಹೆಸರನ್ನು ಆರಿಸಲಾಗಿದ್ದು, ಬೆಂಗಳೂರು ಹಾಗೂ ಕಾರವಾರ ನಡುವಿನ ನೂತನ ರೈಲು ಈ ಹೆಸರಿನಲ್ಲಿ ಸಂಚರಿಸಲಿದೆ.


ಅಲ್ಲದೆ ಈ ಬಗ್ಗೆ ಹಿಂದಿನ ರೈಲ್ವೆ ರಾಜ್ಯ ಸಚಿವರಾಗಿದ್ದ ದಿ. ಸುರೇಶ್ ಅಂಗಡಿಯವರನ್ನು ಭೇಟಿಯಾಗಿ ಕರಾವಳಿಯ ಬಹುಮುಖ್ಯ ಪುಣ್ಯ ಕ್ಷೇತ್ರಗಳ ಮೂಲಕ ಹರಿಯುವ ಪಂಚಗಂಗಾ, ಜಿಲ್ಲೆಯ ತೀರ್ಥ ಕ್ಷೇತ್ರ, ಪ್ರವಾಸೊದ್ಯಮ, ಮೀನುಗಾರಿಕೆ, ಕೃಷಿ ಹಾಗು ಜನಜೀವನಕ್ಕೆ ಆಧಾರವಾಗಿದ್ದು, ಈ ಕಾರಣದಿಂದ ನೂತನ ಬೆಂಗಳೂರು-ಕಾರವಾರ ರೈಲಿಗೆ “ಪಂಚಗಂಗಾ” ಎನ್ನುವ ಹೆಸರಿಡಬೇಕು ಎಂದು ಮನವಿ ಮಾಡಲಾಗಿತ್ತು.

- Advertisement -


ಜನರ ಅಪೇಕ್ಷೆಯನ್ನು ಗೌರವಿಸಿ, ಜಿಲ್ಲೆಯ ಸಂಸ್ಕೃತಿಯನ್ನು ಬಿಂಬಿಸುವ “ಪಂಚ ಗಂಗಾ ಎಕ್ಸ್ ಪ್ರೆಸ್ ” ಎಂದು ಬೆಂಗಳೂರು-ಕಾರವಾರ ರೈಲಿಗೆ ನಾಮಕರಣ ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Join Whatsapp