Home ಟಾಪ್ ಸುದ್ದಿಗಳು ಬೆಂಗಳೂರು | ಡಾ.ವಿಷ್ಣುವರ್ಧನ್ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು

ಬೆಂಗಳೂರು | ಡಾ.ವಿಷ್ಣುವರ್ಧನ್ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು

ಬೆಂಗಳೂರಿನ ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿಯ ಖ್ಯಾತ ಹಿರಿಯ ಕನ್ನಡ ಚಿತ್ರ ನಟ ಡಾ.ವಿಷ್ಣುವರ್ಧನ್ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವುದಾಗಿ ವರದಿಯಾಗಿದೆ.

ಕಿಡಿಗೇಡಿಗಳ ಕೃತ್ಯಕ್ಕೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದು, ದುಷ್ಕರ್ಮಿಗಳ ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಮೆಟ್ರೋ ನಿಲ್ದಾಣದ ಬಳಿ ಈ ದುರ್ಘಟನೆ ನಡೆದಿದ್ದು, ಜನಾಕ್ರೋಶಕ್ಕೆ ಕಾರಣವಾಗಿದೆ.

ಅದಲ್ಲದೇ  ಡಾ.ವಿಷ್ಣುವರ್ಧನ್ ಪ್ರತಿಮೆ ಧ್ವಂಸಗೊಳಿಸಿರುವ ಕಿಡಿಗೇಡಿಗಳ ಈ ಹೀನ ಕೃತ್ಯಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಿಡಿಕಾರಿದ್ದು, ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಈ ಹಿಂದೆಯೂ ಇದೇ ಜಾಗದಲ್ಲಿ ಕಿಡಿಗೇಡಿಗಳು ವಿಷ್ಣುವರ್ಧನ್ ಅವರ ಪ್ರತಿಮೆಯನ್ನೇ ಹೊತ್ತೊಯ್ದಿದ್ದರು. ಇದೀಗ ಎರಡನೇ ಬಾರಿ ಪ್ರತಿಮೆಯನ್ನೇ ಧ್ವಂಸ ಮಾಡಿ ಅಟ್ಟಹಾಸ ಮೆರೆದಿದ್ದಾರೆ.

Join Whatsapp
Exit mobile version