Home ಟಾಪ್ ಸುದ್ದಿಗಳು ಬೆಂಗಳೂರು: 8 ತಿಂಗಳ ಮಗುವಿನಲ್ಲಿ HMPV ವೈರಸ್‌ ಪತ್ತೆ

ಬೆಂಗಳೂರು: 8 ತಿಂಗಳ ಮಗುವಿನಲ್ಲಿ HMPV ವೈರಸ್‌ ಪತ್ತೆ

ಬೆಂಗಳೂರು: ಚೀನಾದಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್(HMPV) ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ ಪತ್ತೆಯಾಗಿದೆ.

ಯಾವುದೇ ಟ್ರಾವೆಲ್‌ ಹಿಸ್ಟರಿ ಇಲ್ಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗುವಿನಲ್ಲಿ ಪತ್ತೆಯಾಗಿದೆ. ಮಗುವಿಗೆ ಜ್ವರ (Fever) ಬಂದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಈ ವೇಳೆ ರಕ್ತ ಪರೀಕ್ಷೆ ಮಾಡಿಸಿದಾಗ ಹೆಚ್‌ಎಂವಿಪಿ ವೈರಸ್ ಇರುವುದು ದೃಢಪಟ್ಟಿದೆ.

ಸದ್ಯಕ್ಕೆ ಒಂದು ಕೇಸ್ ಪತ್ತೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಕಡೆ ಎಲ್ಲೆಲ್ಲಿ ಈ ರೀತಿಯ ಸೋಂಕು ಪತ್ತೆಯಾಗಿದೆ ಎಂಬುದರ ಮಾಹಿತಿ ಕಲೆ ಹಾಕಲು ಆರೋಗ್ಯ ಇಲಾಖೆ ಮುಂದಾಗಿದೆ.

ಎಚ್​ಎಂಪಿವಿ ವೈರಸ್ ಭಾರತದಲ್ಲೂ ಇದೆ. ಆದರೆ, ಅದು ಮ್ಯೂಟೆಷನ್ ಆಗಿದೆಯಾ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ನಮಗೆ ಚೀನಾದಲ್ಲಿ ಮ್ಯುಟೇಟ್ ಆಗಿರುವ ವೈರಸ್​ ಹೇಗಿದೆ ಎಂದು ತಿಳಿದಿಲ್ಲ. ಹೀಗಾಗಿ ಇಲ್ಲಿ ಪತ್ತೆಯಾಗಿರುವುದು ಸಾಮಾನ್ಯ HMPV ವೈರಸ್ಸೇ ಅಥವಾ ಚೀನಾದ ತಳಿಯಾ ಎಂಬ ಗೊಂದಲ ಇದೆ. ಭಾರತದಲ್ಲೂ ಸಾಮಾನ್ಯ HMPV ವೈರಸ್ ಶೇ 0.78 ರಷ್ಟು ಕಾಣಿಸುತ್ತದೆ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ತಿಳಿಸಿದ್ದಾರೆ.

Join Whatsapp
Exit mobile version