ಭೀಮಾ ಕೋರೆಗಾಂವ್ ಕೇಸ್ | ವರವರ ರಾವ್ ಗೆ ಜ.7 ರ ವರೆಗೆ ನಾನಾವತಿ ಆಸ್ಪತ್ರೆಯಲ್ಲೇ ಚಿಕಿತ್ಸೆ : ಬಾಂಬೆ ಹೈಕೋರ್ಟ್

Prasthutha|

ಮುಂಬೈ: ನವೆಂಬರ್ 17, 2018ರ ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಸಾಮಾಜಿಕ ಹೋರಾಟಗಾರ ಹಾಗೂ ಖ್ಯಾತ ಕವಿ ವರವರ ರಾವ್(81) ಅವರು 2021ರ ಜನವರಿ 7ರ ವರೆಗೆ ಮುಂಬೈನ ನಾನಾವತಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಬಾಂಬೆ ಹೈಕೋರ್ಟ್ ತಿಳಿಸಿದೆ.

- Advertisement -

ವರವರ ರಾವ್ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್.ಎಸ್.ಶಿಂದೆ ಹಾಗೂ ಎಂ.ಎಸ್.ಕಾರ್ನಿಕ್ ಅವರು, ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಅವಧಿಯನ್ನು ಜನವರಿ 7ರ ವರೆಗೆ ವಿಸ್ತರಿಸಿದ್ದಾರೆ.

ಪತ್ನಿ ಹೇಮಲತಾ ಅವರು, ವರವರ ರಾವ್ ಅವರ ಆರೋಗ್ಯ ಮತ್ತಷ್ಟು ಗಂಭೀರವಾಗಿದ್ದು, ಅವರನ್ನು ಕೂಡಲೇ ನಾನಾವತಿ ಆಸ್ಪತ್ರೆಗೆ ದಾಖಲಿಸಬೇಕು ಎಂದು ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವರವರ ರಾವ್ ಅವರನ್ನು ಆಸ್ಪತ್ರೆಗೆ ದಾಖಲಿಸುವಂತೆ ಆದೇಶಿಸಿತ್ತು

- Advertisement -

ಬಳಿಕ ಮಹಾರಾಷ್ಟ್ರ ಸರ್ಕಾರ ಜೈಲಿನಲ್ಲಿದ್ದ ವರವರ ರಾವ್ ಅವರನ್ನು ನಾನಾವತಿ ಆಸ್ಪತ್ರೆಗೆ ದಾಖಲಿಸಿದ್ದು, ಕಳೆದ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಂದಿನ ವಿಚಾರಣೆ ವೇಳೆ ವರವರ ರಾವ್ ಅವರ ಹೊಸದಾಗಿ ವೈದ್ಯಕೀಯ ವರದಿ ಸಲ್ಲಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್ ಆದೇಶಿಸಿದೆ.

Join Whatsapp