ಬೆಳಗಾವಿ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚನ್ನಯ್ಯ ಹೆಸರು ನಾಮಕರಣ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಮಂಗಳವಾರ ಪರಿಷತ್ತಿನಲ್ಲಿಂದು ಸದಸ್ಯ ಹರೀಶಕುಮಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳ ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರ ಅಭಿಪ್ರಾಯದಂತೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚನ್ನಯ್ಯ ಅವರು ಹೆಸರು ನಾಮಕರಣ ಮಾಡಲು ಸರ್ಕಾರ ಕ್ರಮ ವಹಿಸಬೇಕೆಂದು ಮನವಿ ಮಾಡಿಕೊಂಡರು.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚನ್ನಯ್ಯ ಹೆಸರು ನಾಮಕರಣಕ್ಕೆ ಸಿಎಂ ಜೊತೆ ಚರ್ಚೆ: ಆರ್.ಅಶೋಕ
Prasthutha|