ಮಂಗಳೂರು: ಗರ್ಭಿಣಿಯ ಜೀವದೊಂದಿಗೆ ಚೆಲ್ಲಾಟ | ತನಿಖೆ ನಡೆಸುವಂತೆ ನ್ಯಾಷನಲ್ ವಿಮೆನ್ಸ್ ಫ್ರಂಟ್ ಆಗ್ರಹ

Prasthutha|

ಮಂಗಳೂರು: ಗರ್ಭಿಣಿಯೊಬ್ಬಳನ್ನು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿಸಿ ಜೀವದೊಂದಿಗೆ ಚೆಲ್ಲಾಟವಾಡಿದ ಪ್ರಕರಣದ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ನ್ಯಾಷನಲ್ ವಿಮೆನ್ಸ್ ಫ್ರಂಟ್ ಆಗ್ರಹಿಸಿದೆ.

- Advertisement -

ಎಂಟು ತಿಂಗಳ ತುಂಬು ಗರ್ಭಿಣಿಯೊಬ್ಬಳನ್ನು ಹೆರಿಗೆಗಾಗಿ ಆಸ್ಪತ್ರೆಗಳಿಂದ ಆಸ್ಪತ್ರೆಗಳಿಗೆ ಅಲೆದಾಡಿಸಿ , ಜೀವ ಹೋಗುವುದೆಂದು ಭಯ ಹುಟ್ಟಿಸಿ ಅಮಾನವೀವಾಗಿ ವರ್ತಿಸಿದ್ದು, ಈ ಬಗ್ಗೆ NWF ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯೆಯರಾದ ಆಶಿಕಾ, ಶಹನಾಝ್ ಬೋಳಾರ್ , ಶಹನಾಝ್ ಕಂದಕ್ ಮಂಗಳೂರು ಡೆಪ್ಯುಟಿ ಕಮಿಷನರ್ ಆಫ್ ಪೋಲೀಸ್(DCP Law&Order) ರವರನ್ನು ಭೇಟಿಯಾಗಿ ಪ್ರಕರಣದ ಕುರಿತು ತನಿಖೆ ನಡೆಸಿ ತಪ್ಪಿತಸ್ಥ ವೈದ್ಯರ ಹಾಗೂ ಆಸ್ಪತ್ರೆ ಆಡಳಿತದ ವಿರುದ್ಧ ಕಠಿಣ ಕಾನೂನು ಕ್ರಮಜರುಗಿಸುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ.

Join Whatsapp