ಮಂಗಳೂರು: ಗೂಡ್ಸ್ ರೈಲಿನ ಮೇಲೆ ಸೆಲ್ಫಿ ತೆಗೆಯಲು ಹೋದ ಯುವಕನಿಗೆ ವಿದ್ಯುತ್ ಶಾಕ್ !

Prasthutha|

- Advertisement -

ಸುರತ್ಕಲ್: ಗೂಡ್ಸ್ ರೈಲಿನ ಮೇಲೆ ಸೆಲ್ಫಿ ತೆಗೆಯಲು ಹೋಗಿ ಯುವಕನೊಬ್ಬ ವಿದ್ಯುತ್ ಶಾಕ್ ಗೆ ಒಳಗಾಗಿ ಭಾಗಶಃ ಸುಟ್ಟು ಹೋಗಿರುವ ಘಟನೆ ಸುರತ್ಕಲ್ ರೈಲ್ವೆ ಸ್ಟೇಷನ್ ನಿಲ್ದಾಣದ ಸಮೀಪದ ಅಗರಮೇಲುನಲ್ಲಿ ಮಂಗಳವಾರ ಸಂಜೆ ನಡೆದಿದೆ.

ಸಲ್ಮಾನ್ ಪಾರಿಸ್ (21) ಅವಘಡಕ್ಕೆ ಒಳಗಾದ ಯುವಕ ಎಂದು ಗುರುತಿಸಲಾಗಿದೆ.
ನಿಂತಿದ್ದ ಗೂಡ್ಸ್ ರೈಲಿನ ಮೇಲೇರಿ ಸೆಲ್ಫಿ ತೆಗೆಯಲು ತೆರಳಿದ್ದ ಸಲ್ಮಾನ್ ಹೈವೋಲ್ಟೇಜ್ ತಂತಿಗಳನ್ನು ಗಮನಿಸದೇ ಇದ್ದುದ್ದರಿಂದ ವಿದ್ಯುತ್ ಶಾಕ್ ಹೊಡೆದು ಭಾಗಶಃ ಸುಟ್ಟು ಹೋಗಿದ್ದಾನೆ.

- Advertisement -

ಸದ್ಯ ಯುವಕನಿಗೆ ಒಳರೋಗಿ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Join Whatsapp