ಮಂಗಳೂರು : ಬೈಕ್ ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಬಿಜೆಪಿ ನಾಯಕರೊಬ್ಬರಿಗೆ ತಲವಾರು ದಾಳಿ ನಡೆಸಿ ಪರಾರಿಯಾಗಿರುವ ಘಟನೆ ಕಳೆದ ರಾತ್ರಿ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊಣಾಜೆ ಗ್ರಾ.ಪಂ ಮಾಜಿ ಸದಸ್ಯ ಪ್ರಕಾಶ್ ಶೆಟ್ಟಿ (38) ತಲವಾರು ದಾಳಿಗೆ ಒಳಗಾದವರು. ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳೊಂದಿಗೆ ಅವರು ಪಾರಾಗಿದ್ದಾರೆ.
ಸ್ನೇಹಿತ ಮಂಜುನಾಥ್ ಜೊತೆ ಬೈಕಿನಲ್ಲಿ ಕಳೆದ ರಾತ್ರಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಹಿಂಬದಿಯಿಂದ ಮತ್ತೊಂದು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ತಲವಾರು ಬೀಸಿದ್ದಾರೆ. ತಲವಾರು ಕೈಗೆ ತಗುಲಿದ ಪರಿಣಾಮ ಸಣ್ಣ ಗಾಯಗಳಾಗಿದೆ. ತಕ್ಷಣ ಪ್ರಕಾಶ್ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.