ಮಂಗಳೂರು : ರಾಜ್ಯ ಸರಕಾರ ನಾಳೆ ರಾತ್ರಿಯಿಂದ 14 ದಿನಗಳ ಕಾಲ ಕೋವಿಡ್ ಕರ್ಫ್ಯೂ ಜಾರಿಗೊಳಿಸಿದೆ. ಹೀಗಾಗಿ ಮಂಗಳೂರು ನಗರದಿಂದ ವಲಸೆ ಕಾರ್ಮಿಕರು ತಮ್ಮ ತಮ್ಮ ಊರಿಗೆ ಪ್ರಯಾಣ ಬೆಳೆಸಲು ಆರಂಭಿಸಿದ್ದಾರೆ.
ಹೀಗಾಗಿ ಬಿಜೈ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಪೂರ್ತಿ ಜನ ಜಂಗುಳಿಯಿಂದ ತುಂಬಿದೆ.ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ವಲಸೆ ಕಾರ್ಮಿಕರು ಮಂಗಳೂರು ನಗರದಲ್ಲಿ ಬದುಕು ಕಟ್ಟಿಕೊಂಡಿದ್ದರು. ಆದರೆ, ಇದೀಗ ರಾಜ್ಯ ಸರ್ಕಾರ 14 ದಿನಗಳ ಲಾಕ್ಡೌನ್ ಘೋಷಣೆ ಮಾಡಿದ್ದು, ಎಲ್ಲರೂ ಸಾಮಾನು ಸರಂಜಾಮುಗಳೊಂದಿಗೆ ತಮ್ಮ ಊರುಗಳಿಗೆ ಪ್ರಯಾಣ ಬೆಳೆಸಿದ್ದಾರೆ. ಕರ್ಫ್ಯೂ ಹಿನ್ನೆಲೆ ಕೆಲಸಗಳಿಲ್ಲದಿರುವುದರಿಂದ ಎಲ್ಲರೂ ತಮ್ಮ ಊರುಗಳಿಗೆ ಪ್ರಯಾಣ ಬೆಳೆಸಿದ್ದಾರೆ. ರಾಯಚೂರು, ಕುಷ್ಟಗಿ, ಗದಗ, ಬಾದಾಮಿ, ಬಿಜಾಪುರ ಮುಂತಾದ ಕಡೆಗಳಿಗೆ ಹೊರಟಿರುವ ವಲಸಿಗ ಕಾರ್ಮಿಕರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಜಮಾಯಿಸಿದ್ದಾರೆ.