Home ಟಾಪ್ ಸುದ್ದಿಗಳು ಮಗಳ ಮೇಲೆ ಅತ್ಯಾಚಾರವೆಸಗಿ ವೇಶ್ಯಾವಾಟಿಕೆಗೆ ತಳ್ಳಿದ ತಂದೆ: ಎಸ್ ಪಿ ಜಿಲ್ಲಾಧ್ಯಕ್ಷ ಸೇರಿ 28 ಮಂದಿ...

ಮಗಳ ಮೇಲೆ ಅತ್ಯಾಚಾರವೆಸಗಿ ವೇಶ್ಯಾವಾಟಿಕೆಗೆ ತಳ್ಳಿದ ತಂದೆ: ಎಸ್ ಪಿ ಜಿಲ್ಲಾಧ್ಯಕ್ಷ ಸೇರಿ 28 ಮಂದಿ ವಿರುದ್ಧ ಪ್ರಕರಣ ದಾಖಲು

ಲಲಿತಪುರ: ತಂದೆಯೊಬ್ಬ ಹೆತ್ತ ಮಗಳ ಮೇಲೆ ಅತ್ಯಾಚಾರ ಎಸಗಿ ಬಳಿಕ ವೇಶ್ಯಾವಾಟಿಕೆಗೆ ತಳ್ಳಿರುವ ಘಟನೆ ಉತ್ತರ ಪ್ರದೇಶದ ಲಲಿತಪುರದಲ್ಲಿ ನಡೆದಿದೆ.

ಕಳೆದ ಕೆಲ ವರ್ಷಗಳಿಂದ ಅಪ್ರಾಪ್ತೆ ಮೇಲೆ ನಿರಂತರವಾಗಿ ಅತ್ಯಾಚಾರ ಹಾಗೂ ಬೆದರಿಕೆ ಹಾಕುವ ಮೂಲಕ ಪಾಪಿ ತಂದೆ ಖುದ್ದಾಗಿ ಈ ಕೆಲಸ ಮಾಡಿಸಿದ್ದಾನೆ.

ಈ ಬಗ್ಗೆ ಬಾಲಕಿ ತನ್ನ ತಾಯಿಯೊಡನೆ ಹೇಳಿದ್ದು, ತನ್ನ ತಾಯಿಯ ಸಹಾಯದೊಂದಿಗೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಸೇರಿದಂತೆ 28 ಮಂದಿ ವಿರುದ್ಧ ದೂರು ದಾಖಲಾಗಿದೆ.

Join Whatsapp
Exit mobile version