ಬಸ್ಸೊಂದು ಸೇತುವೆಯಿಂದ ಕೆಳಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 32 ಮಂದಿ ಸಾವನ್ನಪ್ಪಿ, ಹಲವರು ಕಾಣೆಯಾಗಿರುವ ದಾರುಣ ಘಟನೆ ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನಿಂದ 560 ಕಿ.ಮೀ.ದೂರದ ಸಿಧಿ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ಅಪಘಾತದ ವೇಳೆ ಬಸ್ ನಲ್ಲಿ ಸುಮಾರು 60 ಮಂದಿ ಪ್ರಯಾಣಿಕರು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಇದುವರೆಗೆ 18 ಮೃತದೇಹಗಳನ್ನು ಬನ್ಸಾಗರ್ ಕಾಲುವೆಯಿಂದ ಹೊರಗೆ ತೆಗೆಯಲಾಗಿದ್ದು, ಉಳಿದವರಿಗಾಗಿಶೋಧ ಕಾರ್ಯ ಮುಂದುವರಿದಿದೆ. ಏಳು ಮಂದಿ ಈಜಿ ದಡ ಸೇರಿದ್ದಾರೆ ಎಂದು ರೆವಾ ವಲಯದ ಐಜಿ ಉಮೇಶ್ ಜೊಗಾ ತಿಳಿಸಿದ್ದಾರೆ.
ದುರಂತದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಪಡಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ವರ್ಚುವಲ್ ಮೂಲಕ ಭಾಗವಹಿಸಬೇಕಾಗಿದ್ದ ಕಾರ್ಯಕ್ರಮ ಕೂಡ ರದ್ದಾಗಿದೆ.a