ಮುಂಬೈ: ಮರಕ್ಕೆ ಕಬ್ಬಿಣದ ಸರಪಳಿಯಲ್ಲಿ ಕಟ್ಟಿಹಾಕಿದ ಸ್ಥಿತಿಯಲ್ಲಿ ಮಹಿಳೆಯೊಬ್ಬಳು ಮಹಾರಾಷ್ಟ್ರದ ಸಿಂಧುದುರ್ಗ ದಟ್ಟ ಅರಣ್ಯದಲ್ಲಿ ಪತ್ತೆಯಾಗಿರುವ ಆಶ್ಚರ್ಯ ಘಟನೆ ವರದಿಯಾಗಿದೆ. ಸುಮಾರು 50 ವರ್ಷದ ಮಹಿಳೆಯನ್ನು ಕಬ್ಬಿಣದ ಸರಪಳಿಯಿಂದ ಮರಕ್ಕೆ ಕಟ್ಟಿಹಾಕಲಾಗಿದ್ದು, ಆಕೆಯ ಬಳಿ ಅಮೆರಿಕದ ಪಾಸ್‌ಪೋರ್ಟ್‌ನ ಜೆರಾಕ್ಸ್ ಮತ್ತು ತಮಿಳುನಾಡು ವಿಳಾಸವಿರುವ ಆಧಾರ್ ಕಾರ್ಡ್ ಪತ್ತೆಯಾಗಿದೆ.
ಮುಂಬೈನಿಂದ ಸುಮಾರು 450 ಕಿಲೋಮೀಟರ್ ದೂರದಲ್ಲಿರುವ ಸೋನುರ್ಲಿ ಗ್ರಾಮದಲ್ಲಿ ಸಂಜೆ ಕುರಿಗಾಹಿಯೊಬ್ಬರಿಗೆ ಅಳಲು ಕೇಳಿದ್ದು, ಸರಪಳಿಯಲ್ಲಿ ಸಿಲುಕಿರುವ ಮತ್ತು ಸಂಕಷ್ಟದಲ್ಲಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಆಕೆಯನ್ನು ರಕ್ಷಿಸಿ ನಂತರ ಸಿಂಧುದುರ್ಗದ ಓರೋಸ್‌ನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಕೆಯನ್ನು ಲಲಿತಾ ಕಯಿ ಎಂದು ಗುರುತಿಸಲಾಗಿದ್ದು, ಆಕೆಯ ಮಾನಸಿಕ ಮತ್ತು ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ, ಅವರಿಗೆ ಉನ್ನತ ಚಿಕಿತ್ಸೆಗಾಗಿ ಗೋವಾ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.
ಸದ್ಯ ಆಕೆ ಅಪಾಯದಿಂದ ಪಾರಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಆಕೆ ಮನೋ ಖಾಯಿಲೆಯಿಂದ ಬಳಲುತ್ತಿದ್ದಾಳೆ. ಅದಕ್ಕೆ ಬೇಕಾದ ಸೂಕ್ತ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ. ನಾವು ಆಕೆಯ ತಮಿಳುನಾಡು ವಿಳಾಸ ಆಧಾರ್ ಕಾರ್ಡ್, ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಪಾಸ್‌ಪೋರ್ಟ್‌ನ ಜೆರಾಕ್ಸ್ ಆಕೆಯ ಬಳಿ ಇತ್ತು. ಆಕೆಯ ವೀಸಾ ಅವಧಿ ಮುಗಿದಿದೆ.
[29/07, 7:36 pm] PMI: ಬೆಂಗಳೂರು: ರಸ್ತೆಯಲ್ಲಿ ರಾಶಿಗಟ್ಟಲೆ ಮೊಳೆಗಳು ಪತ್ತೆ, ಪಂಕ್ಚರ್‌ವಾಲಾಗಳ ಕೃತ್ಯವೆಂದ ನೆಟ್ಟಿಗರು
ಬೆಂಗಳೂರು: ಜಾಲಹಳ್ಳಿಯ ಕುವೆಂಪು ವೃತ್ತದ ಕೆಳಸೇತುವೆಯಲ್ಲಿ ರಾಶಿಗಟ್ಟಲೆ ಮೊಳೆಗಳು ಒಂದೆಡೆಯೇ ಪತ್ತೆಯಾಗಿದ್ದು, ಟ್ರಾಫಿಕ್ ಪೊಲೀಸರೇ ಅವುಗಳನ್ನು ಸ್ಥಳದಿಂದ ತೆಗೆದು ಕ್ಲೀನ್ ಮಾಡುವ ಅಭಿಯಾನದ ವೀಡಿಯೊ ವೈರಲ್ ಆಗಿದೆ.
ರಸ್ತೆ ಸುರಕ್ಷತೆಯನ್ನು ಖಚಿತಪಡಿಸಲು ಪೊಲೀಸರು ಆಕ್ಷನ್‌ಗೆ ಇಳಿದಿದ್ದರು. ವಾಹನಗಳನ್ನು ಪಂಕ್ಚರ್ ಮಾಡುವ ಉದ್ದೇಶದಿಂದಲೇ ಮೊಳೆಗಳನ್ನು ರಸ್ತೆಯಲ್ಲಿ ಎಸೆಯಲಾಗಿದೆ ಎಂದು ತಿಳಿದುಬಂದಿದೆ. ಪೊಲೀಸ್ ಅಧಿಕಾರಿಗಳು ಹೆಚ್ಚಿನ ಮೊಳೆಗಳನ್ನು ಸಂಗ್ರಹಿಸಿ ಜಾಗವನ್ನು ಪ್ರಯಾಣಕ್ಕೆ ಸುರಕ್ಷಿತಗೊಳಿಸಿದ್ದಾರೆ. ಇನ್ನೂ ಇರಬಹುದಾದ ಮೊಳೆಗಳ ಬಗ್ಗೆ ಹುಷಾರಾಗಿರುವಂತೆ ಎಚ್ಚರಿಕೆ ನೀಡಿದ್ದಾರೆ.
ವೈರಲ್ ವಿಡಿಯೋ ಪೋಸ್ಟ್‌ಗೆ ನೆಟ್ಟುಗರು ಪ್ರತಿಕ್ರಿಯಿಸಿದ್ದಾರೆ. ಪೊಲೀಸರು ಮಾಡಿದ ಕೆಲಸವನ್ನು ಶ್ಲಾಘಿಸಿದ್ದಾರೆ. ಜೊತೆಗೆ ತೊಂದರೆ ಸೃಷ್ಟಿಸಲು ಮೊಳೆ ಎಸೆದ ಅಪರಾಧಿಗಳನ್ನು ಖಂಡಿಸಿದ್ದಾರೆ. ಹೆಚ್ಚಿನ ವ್ಯಾಪಾರಕ್ಕಾಗಿ ಹತ್ತಿರದ ಈ ಕೆಲಸ ಮಾಡಿರಬಹುದು ಎಂದು ಕೆಲವರು ಅನುಮಾನಿಸಿದ್ದಾರೆ. ಪೊಲೀಸರು ಈ ನಿಟ್ಟಿನಲ್ಲಿಯೂ ತನಿಖೆ ನಡೆಸುತ್ತಿದ್ದಾರೆ.