ಮಹಿಳೆಯರಿಗೆ ತಿಂಗಳಿಗೆ ₹2,500; ಕಾಂಗ್ರೆಸ್ ಗ್ಯಾರಂಟಿ ಘೋಷಿಸಿದ ಡಿ.ಕೆ. ಶಿವಕುಮಾರ್‌

Prasthutha|

- Advertisement -

ನವದೆಹಲಿ: ಮುಂಬರುವ ದೆಹಲಿ ವಿಧಾನಸಬಾ ಚುನಾವಣೆಗೆ ಕಾಂಗ್ರೆಸ್‌ ಗ್ಯಾರಂಟಿ ಯೋಜನೆ ಘೋಷಿಸಿದೆ. ಕರ್ನಾಟಕದ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಅವರು ಪತ್ರಿಕೋಗೋಷ್ಠಿ ನಡೆಸಿ ಜನರಿಗೆ ನೀಡಲಿರುವ ಗ್ಯಾರಂಟಿ ಯೋಜನೆಯನ್ನು ಅನಾವರಣಗೊಳಿಸಿದರು.

ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿರುವ ಅವರು, ‘ದೆಹಲಿಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ‘ಪ್ಯಾರಿ ದೀದಿ’ ಯೋಜನೆ ಜಾರಿ ಮಾಡಲಿದ್ದೇವೆ. ಇದರ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು ₹2,500 ನೀಡುತ್ತೇವೆ‌. ಪಕ್ಷ ಅಧಿಕಾರಕ್ಕೆ ಬಂದ ನಂತರ ಕರ್ನಾಟಕದಲ್ಲಿ ಮಾಡಿದ ಹಾಗೆಯೇ ಮೊದಲ ಸಚಿವ ಸಂಪುಟದ ಸಭೆಯಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು’ ಎಂದರು.



Join Whatsapp