Home ಟಾಪ್ ಸುದ್ದಿಗಳು ಮಹಿಳೆಯರ ಬಗ್ಗೆ ಬಹಳ ಗೌರವವಿದೆ, ಇಂಥ ಚಿಲ್ಲರೆ ಕೆಲಸಗಳನ್ನು ಯಾವತ್ತೂ ಮಾಡಲ್ಲ: ಡಿಕೆ ಶಿವಕುಮಾರ್

ಮಹಿಳೆಯರ ಬಗ್ಗೆ ಬಹಳ ಗೌರವವಿದೆ, ಇಂಥ ಚಿಲ್ಲರೆ ಕೆಲಸಗಳನ್ನು ಯಾವತ್ತೂ ಮಾಡಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ಮಹಿಳೆಯರ ಬಗ್ಗೆ ಬಹಳ ಗೌರವವಿದೆ, ಇಂಥ ಚಿಲ್ಲರೆ ಕೆಲಸಗಳನ್ನು ಯಾವತ್ತೂ ಮಾಡಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.


ಹೆಚ್ ಡಿ ಕುಮಾರಸ್ವಾಮಿ ಹುಬ್ಬಳ್ಳಿಯಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಪ್ರಜ್ವಲ್ ರೇವಣ್ಣ ಪ್ರಕರಣದ ಹಿಂದೆ ಡಿಕೆ ಶಿವಕುಮಾರ್ ಪಾತ್ರವಿದೆ ಅಂತ ಹೇಳಿರುವುದಕ್ಕೆ ಡಿಕೆ ಶಿವಕುಮಾರ್ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದರು.


ಕುಮಾರಸ್ವಾಮಿ ತನ್ನ ಮನೆಯ ಮುಂದೆ ಪ್ರತಿಭಟನೆ ಮಾಡಿಸುವುದಾದರೆ ಧಾರಾಳವಾಗಿ ಮುಂದುವರಿಯಲಿ ಎಂದ ಶಿವಕುಮಾರ್, ಕುಮಾರಸ್ವಾಮಿಯವರ ಹೇಳಿಕೆ ಮತ್ತು ಬಿಜೆಪಿ ಕಾರ್ಯಕರ್ತ ದೇವರಾಜೇಗೌಡ ಅವರು ಪ್ರಜ್ವಲ್ ವಿಡಿಯೋಗಳ ಬಗ್ಗೆ ಪಕ್ಷದ ವರಿಷ್ಟರಿಗೆ ಪತ್ರ ಬರೆದು ಹೇಳಿರುವದನ್ನು ಓದಿ ಹೇಳಿದರು. ಪ್ರಜ್ವಲ್ ರೇವಣ್ಣ ಹಾಸನದಿಂದ ಸ್ಪರ್ಧಿಸಿದರೆ ಪಕ್ಷದ ಇಮೇಜಿಗೆ ಧಕ್ಕೆಯಾಗುತ್ತದೆ, ಚುನಾವಣೆಯಲ್ಲಿ ಕಾಂಗ್ರೆಸ್ ಈ ಅಂಶವನ್ನು ಟ್ರಂಪ್ ಕಾರ್ಡ್ ಆಗಿ ಬಳಸಿಕೊಳ್ಳುತ್ತದೆ ಎಂದು ಬರೆದಿದ್ದಾರೆ ಎಂದು ಶಿವಕುಮಾರ್ ಹೇಳಿದರು.

Join Whatsapp
Exit mobile version