ಮಂಗಳೂರು: ಉದ್ಯಮಿ ಮುಮ್ತಾಝ್ ಅಲಿ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಆರು ಮಂದಿ ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಸೋಮವಾರ ಸಂಜೆ ಮಂಗಳೂರಿನ ಜೆಎಂಎಫ್ ಸಿ ನ್ಯಾಯಾಲಯಕ್ಕೆ 600ಕ್ಕೂ ಹೆಚ್ಚಿನ ಪುಟಗಳ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರಮುಖ ಆರೋಪಿ ಎನ್ನಲಾದ ಸುರತ್ಕಲ್ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ರಹ್ಮತ್ ಮತ್ತು ಆಕೆಯ ಪತಿ ಪ್ರಕರಣದ 5ನೇ ಆರೋಪಿ ಶುಐಬ್, ಎ2 ಆರೋಪಿ ಅಬ್ದುಲ್ ಸತ್ತಾರ್, ಎ3 ಆರೋಪಿ ನಂದಾವರ ನಿವಾಸಿ ಕಲಂದರ್ ಶಾಫಿ, ಎ4 ಆರೋಪಿ ಕೃಷ್ಣಾಪುರ ನಿವಾಸಿ ಮುಸ್ತಫ ಹಾಗೂ 6ನೇ ಆರೋಪಿ ಸತ್ತಾರ್ ನ ಕಾರು ಚಾಲಕ ಸಿರಾಜ್ ಎಂಬವರ ವಿರುದ್ಧ ಪ್ರಕರಣದ ತನಿಖಾಧಿಕಾರಿಯಾಗಿರುವ ಸುರತ್ಕಲ್ ಪೊಲೀಸ್ ಠಾಣೆಯ ನಿರೀಕ್ಷಕ ಮಹೇಶ್ ಪ್ರಸಾದ್ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
2024ರ ಅ.7ರಂದು ಮುಮ್ತಾಝ್ ಅಲಿಯವರ ಕಾರು ಅಪಘಾತಕ್ಕೀಡಾದ ಸ್ಥಿತಿಯಲ್ಲಿ ಕೂಳೂರು ಸೇತುವೆಯಲ್ಲಿ ಪತ್ತೆಯಾಗಿತ್ತು. ಅವರ ಮೃತದೇಹ ಅ.8ರಂದು ನದಿಯಲ್ಲಿ ಪತ್ತೆಯಾಗಿತ್ತು.