ಮೈಸೂರು ಬಂದ್‌: RSS ಕಚೇರಿಗೆ ತೆರಳಲು ಯತ್ನ; ಪೊಲೀಸರಿಂದ ತಡೆ

Prasthutha|

ಮೈಸೂರು: ಡಾ.ಬಿ.ಆರ್.ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿಯು ನಡೆಸುತ್ತಿರುವ ಬಂದ್ ಬೆಂಬಲಿಸಿ ದಲಿತ ಸಂಘಟನೆಯ ಪ್ರಮುಖರು ಆರ್.ಎಸ್.ಎಸ್ ಕಚೇರಿ ‘ಪಂಚವಟಿ’ ಮುಂಭಾಗದ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸಿದರು. ಪೊಲೀಸರು ಅವರನ್ನು ತಡೆದರು.

- Advertisement -

ಮೆರವಣಿಗೆ ತೆರಳಲು ಪೊಲೀಸರು ಅವಕಾಶ ನೀಡದಿದ್ದಾಗ ಪ್ರತಿಭಟನಾಕಾರರು ರಸ್ತೆಯಲ್ಲೇ ಕುಳಿತು ಘೋಷಣೆ ಕೂಗಿದರು. ಪಂಚವಟಿ ಮುಂಭಾಗ ಶಾಂತಿಯುತವಾಗಿ ಮೆರವಣಿಗೆ ನಡೆಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು. ಮನವಿಗೆ ಸ್ಪಂದಿಸದ ಪೊಲೀಸರು ಅವರನ್ನು ವಾಪಸ್ ಕಳಿಸಿದರು.

ಇನ್ನು ಗ್ರಾಮಾಂತರ ಬಸ್ ನಿಲ್ದಾಣ(ಸಬ್ ಅರ್ಬನ್) ಮುಂಭಾಗ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಖಾಸಗಿ ವಾಹನಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮಾಂತರ ಬಸ್ ನಿಲ್ದಾಣದ ಮುಂಭಾಗದ ಪ್ರಮುಖ ರಸ್ತೆಗಳಲ್ಲಿ ಅಮಿತ್ ಶಾ ಪ್ರತಿಕೃತಿಯ ಮೆರವಣಿಗೆ ನಡೆಸಿದರು. ಪೊಲೀಸರ ವಿರೋಧದ ನಡುವೆಯೂ ಪ್ರತಿಕೃತಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.



Join Whatsapp