ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ತಮ್ಮ ತಪ್ಪುಗಳನ್ನು ಒಪ್ಪಿಕೊಂಡು, ಬಳಿಕ ತಜ್ಞರ ಸಲಹೆಯಂತೆ ನಡೆದಾಗ ಮಾತ್ರ ದೇಶದ ಪುನರ್ ನಿರ್ಮಾಣ ಸಾಧ್ಯವಾಗಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್, ನಿರಾಕರಣೆಯಲ್ಲಿಯೇ ಬದುಕುವುದರಿಂದ ಯಾವ ಸಮಸ್ಯೆಗೂ ಪರಿಹಾರ ದೊರಕುವುದಿಲ್ಲ. ಸಾರ್ವಜನಿಕ ಹಾಗೂ ರಾಜಕೀಯ ವಲಯದಲ್ಲಿ ಕೋವಿಡ್ ನಿರ್ವಹಣೆಯಲ್ಲಿ ಮೋದಿ ಸರ್ಕಾರ ಎಡವಿದೆ ಎಂಬ ಆರೋಪಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೋವಿಡ್ ಸೋಂಕಿನ ಕಾರಣದಿಂದಾಗಿ ಇಡೀ ವಿಶ್ವದ ನಾಗರಿಕ ವ್ಯವಸ್ಥೆ ಅಡಿಮೇಲಾಗಿದ್ದು, ಜಾಗತಿಕವಾಗಿ ಬಡತನದ ಮಟ್ಟ ಏರಿಕೆಯಾಗಿದೆ ಹಾಗೂ ಸಾಮಾನ್ಯ ಮಧ್ಯಮ ವರ್ಗದವರ ಆದಾಯ ಇಳಿಮುಖವಾಗುತ್ತಿದೆ.
ಇದು ಕೇಂದ್ರ ಕೋವಿಡ್ ನಿರ್ವಹಣೆಯಲ್ಲಿ ಮಾಡಿರುವ ಕೆಟ್ಟ ನಿರ್ವಹಣೆಯಾಗಿದೆ. ನಾವು ಈಗ ಭವಿಷ್ಯ ನೋಡಬೇಕು. ಪ್ರಧಾನಿ ತನ್ನ ತಪ್ಪುಗಳನ್ನು ಒಪ್ಪಿಕೊಂಡಾಗ ಮಾತ್ರ ದೇಶದ ಪುನರ್ ನಿರ್ಮಾಣ ಸಾಧ್ಯವಾಗಲಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.