Home ಟಾಪ್ ಸುದ್ದಿಗಳು ಮೋದಿ ಭಾಷಣದ ವೇಳೆ ಕೈಕೊಟ್ಟ ಟೆಲಿಪ್ರಾಂಪ್ಟರ್: ಮತ್ತೆ ಕುಹಕವಾಡಿದ ಕಾಂಗ್ರೆಸ್

ಮೋದಿ ಭಾಷಣದ ವೇಳೆ ಕೈಕೊಟ್ಟ ಟೆಲಿಪ್ರಾಂಪ್ಟರ್: ಮತ್ತೆ ಕುಹಕವಾಡಿದ ಕಾಂಗ್ರೆಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಟೆಲಿಪ್ರಾಂಪ್ಟರ್ ಸಹಾಯವಿಲ್ಲದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಷಣ ಮಾಡಲಾರರು ಎಂದು ಕಾಂಗ್ರೆಸ್ ಮತ್ತೆ ಆರೋಪಿಸಿದೆ.
ಈ ಕುರಿತು ಎಕ್ಸ್ ನಲ್ಲಿ ವ್ಯಂಗ್ಯವಾಗಿ ಪೋಸ್ಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಟೆಲಿಪ್ರಾಂಪ್ಟರ್ ಇಲ್ಲದೆ ಒಂದು ಶಬ್ದ ಕೂಡ ಮಾತಾಡಲು ಸಾಧ್ಯವೇ ಇಲ್ಲ ಎಂದು ಮೋದಿ ಅವರ ದೆಹಲಿ ಚುನಾವಣಾ ಪ್ರಚಾರ ಕಾರ್ಯಕ್ರಮದ ವಿಡಿಯೊ ಹಂಚಿಕೊಂಡಿದೆ.
‘ದೆಹಲಿಯಲ್ಲಿ ಚುನಾವಣಾ ಪ್ರಚಾರ ಭಾಷಣದ ವೇಳೆ ಟೆಲಿಪ್ರಾಂಪ್ಟರ್ ಕೈಕೊಟ್ಟಾಗ ಮೋದಿಯಿಂದ ‘ಮೌನವೃತ’ ಆಚರಣೆ.. ನರೇಂದ್ರ ಮೋದಿ ಅವರು ಟೆಲಿಪ್ರಾಂಪ್ಟರ್ ಇಲ್ಲದೆ ಒಂದು ಶಬ್ದ ಕೂಡ ಮಾತಾಡಲು ಸಾಧ್ಯವೇ ಇಲ್ಲ… ಏಕೆಂದರೆ ‘ಒಳಗಡೆ’ ಏನೂ ಇಲ್ಲ.. ಎಂದು ಕುಹಕವಾಡಿದೆ.
ಮೋದಿ ಹೇಳಿದ್ದೇನು?
ರೋಹಿಣಿ ಬಡಾವಣೆಯಲ್ಲಿ ದೆಹಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘ಎಎಪಿ ಸರ್ಕಾರ ದೆಹಲಿಯ ಪಾಲಿಗೆ ‘ವಿಪತ್ತು’. ದೆಹಲಿಯು ಈ ‘ವಿಪತ್ತಿ’ನಿಂದ ಪಾರಾದ ನಂತರವೇ ಅಭಿವೃದ್ಧಿಯ ಡಬಲ್ ಎಂಜಿನ್ ಇಲ್ಲಿ ಕಾರ್ಯಾರಂಭ ಮಾಡಲಿದೆ ಎಂದಿದ್ದರು.
‘ಎಎಪಿ ಸರ್ಕಾರ ರಾಜಧಾನಿಯಲ್ಲಿ ಕೇಂದ್ರದ ಜೊತೆಗೆ ಸಂಘರ್ಷ ಮಾಡುತ್ತಲೇ ಒಂದು ದಶಕ ಪೋಲು ಮಾಡಿತು. ಇಲ್ಲಿ ಅಭಿವೃದ್ಧಿ ಯೋಜನೆಗಳ ಸಾಕಾರಕ್ಕಾಗಿ ಬಿಜೆಪಿಗೆ ಒಂದು ಅವಕಾಶ ಕಲ್ಪಿಸಬೇಕು’ ಎಂದು ಹೇಳಿದ್ದರು.

Join Whatsapp
Exit mobile version