ಮೋದಿ ಮತ್ತು ಯೋಗಿ ವಿರುದ್ಧ ಫೇಸ್‌ಬುಕ್ ಪೋಸ್ಟ್| ಉತ್ತರ ಪ್ರದೇಶದಲ್ಲಿ ಕಾನೂನು ವಿದ್ಯಾರ್ಥಿಯ ಬಂಧನ

Prasthutha|

- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಉತ್ತರಪ್ರದೇಶದ ಕಾನೂನು ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ಇಪ್ಪತ್ನಾಲ್ಕು ವರ್ಷದ ಅರುಣ್ ಯಾದವ್ ವಿರುದ್ಧ 153 ಎ ಮತ್ತು 469 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯಲ್ಲಿಯೂ ಅರುಣ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮೋದಿ ಮತ್ತು ಯೋಗಿ ಅವರ ಚಿತ್ರಗಳನ್ನು ವಿರೂಪಗೊಳಿಸಿದ್ದ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅರುಣ್‌ನನ್ನು ಬಂಧಿಸಲಾಗಿದೆ. ಅರುಣ್ ನನ್ನು ಗೋರಖ್‌ಪುರದ ನ್ಯಾಯಾಲಯದಲ್ಲಿ ಹಾಜರುಪಡಿಸಿ ನ್ಯಾಯಾಂಗ ಬಂಧನದಲ್ಲಿಡಲಾಗಿದೆ. ಈ ಘಟನೆಯ ನಂತರ ಅರುಣ್ ನನ್ನು ಗೋರಖ್ ಪುರ ವಿಶ್ವವಿದ್ಯಾಲಯವು ಅಮಾನತುಗೊಳಿಸಿದೆ. “ಅರುಣ್ ಯಾದವ್ ಕ್ಯಾಂಪಸ್ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸಲಾಗಿದೆ. ಸಮಿತಿಯು ಅರುಣ್ ನನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಫೋನ್ ಸ್ವಿಚ್ ಆಫ್ ಆಗಿತ್ತು. ಆದ್ದರಿಂದ ಅರುಣ್ ಗೆ ಪತ್ರವನ್ನು ಕಳುಹಿಸಲಾಗಿದೆ “ಎಂದು ವಿಶ್ವವಿದ್ಯಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Join Whatsapp