ಯಡಿಯೂರಪ್ಪರನ್ನು ಬೆಂಬಲಿಸಿ ಸ್ವಾಮೀಜಿಗಳ ಸಮಾವೇಶ: 500ಕ್ಕೂ ಅಧಿಕ ಮಠಾಧೀಶರು ಭಾಗಿ

Prasthutha|

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಅವರನ್ನು ಕೆಳಗಿಳಿಸಬಾರದು ಎಂದು ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ ತರಲು ಬೆಂಗಳೂರಿನಲ್ಲಿ 500ಕ್ಕೂ ಅಧಿಕ ಮಠಾಧೀಶರು ಸಮಾವೇಶ ನಡೆಸುತ್ತಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ರಾಜ್ಯದ ವಿವಿಧ ಮಠಾಧೀಶರು ಸೇರಿ ಒಕ್ಕೊರಲಿನಿಂದ ಯಡಿಯೂರಪ್ಪ ಅವರಿಗೆ ಬೆಂಬಲ ಘೋಷಿಸಿದ್ದಾರೆ.

- Advertisement -


ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ, ತಿಪಟೂರಿನ ರುದ್ರಮುನಿ ಸ್ವಾಮೀಜಿ ಮತ್ತು ಚಿತ್ರದುರ್ಗದ ಬಸವಕುಮಾರ ಸ್ವಾಮೀಜಿ ನೇತೃತ್ವದಲ್ಲಿ ಸಮಾವೇಶ ನಡೆಯುತ್ತಿದೆ.

ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ಸ್ವಾಮೀಜಿಗಳು ಈ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ. ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದರೆ ಬಿಜೆಪಿ ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ಬೆಂಬಲ ಕಳೆದುಕೊಳ್ಳುತ್ತದೆ ಎಂಬ ಸಂದೇಶವನ್ನು ಬಿಜೆಪಿ ವರಿಷ್ಠರಿಗೆ ರವಾನಿಸುವುದು ಈ ಸಮಾವೇಶದ ಪ್ರಮುಖ ಉದ್ದೇಶವಾಗಿದೆ.

- Advertisement -

ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರಿಯಲಿ: ನಿಡುಮಾಮಿಡಿ ಶ್ರೀ
ಸಮಾವೇಶದಲ್ಲಿ ಮಾತನಾಡಿದ ದಿಂಗಾಲೇಶ್ವರ ಶ್ರೀ, ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರನ್ನು ಬದಲಾಯಿಸುವುದು ಸರಿಯಲ್ಲ. ಯಡಿಯೂರಪ್ಪಮ ಅವರಿಗೆ ಧೈರ್ಯ ತುಂಬುವುದಕ್ಕಾಗಿ ಮಠಾಧೀಶರು ಸೇರಿದ್ದಾರೆ. ನಾವು ಯಾರ ಪರವೂ ಅಲ್ಲ, ಯಾರ ವಿರುದ್ಧವೂ ಅಲ್ಲ. ಉತ್ತಮವಾಗಿ ಕೆಲಸ ಮಾಡುತ್ತಿರುವ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲಿ ಎಂಬುದು ನಮ್ಮ ಅಭಿಪ್ರಾಯ ಎಂದರು.

Join Whatsapp