Home ರಾಜ್ಯ ಯಡಿಯೂರಪ್ಪ ನಾಮಕಾವಸ್ತೆ ಮುಖ್ಯಮಂತ್ರಿ, ಮಗನಿಂದ ಅಧಿಕಾರ ಚಲಾವಣೆ; ಸಿದ್ದರಾಮಯ್ಯ

ಯಡಿಯೂರಪ್ಪ ನಾಮಕಾವಸ್ತೆ ಮುಖ್ಯಮಂತ್ರಿ, ಮಗನಿಂದ ಅಧಿಕಾರ ಚಲಾವಣೆ; ಸಿದ್ದರಾಮಯ್ಯ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ನಾಯಕರಿಗೆ ತಡವಾಗಿ ಜ್ಞಾನೋದಯವಾಗಿದೆ. ಯಡಿಯೂರಪ್ಪ ನಾಮಕಾವಸ್ತೆ ಮುಖ್ಯಮಂತ್ರಿ, ನಿಜವಾದ ಅಧಿಕಾರ ಚಲಾಯಿಸುತ್ತಿರುವುದು ಅವರ ಮಗ ಎಂದು ನಾನು ಬಹಳ ಹಿಂದೆಯೇ ಹೇಳಿದ್ದೆ. ಕೆಲವರಿಗೆ ಈಗೀಗ ಸತ್ಯ ಗೊತ್ತಾಗುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಸಿ.ಡಿ ತೋರಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬೆದರಿಸಿ, ಕೆಲವರು ಮಂತ್ರಿ ಹುದ್ದೆ ಪಡೆದಿದ್ದಾರೆ ಎಂದು ಬಿಜೆಪಿ ಶಾಸಕರೇ ಆರೋಪಿಸುತ್ತಿದ್ದಾರೆ. ಬ್ಲಾಕ್‌ ಮೇಲ್ ಮಾಡಿದವರು ಯಾರೇ ಆಗಿರಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಧೈರ್ಯ ಮುಖ್ಯಮಂತ್ರಿಗಳಿಗಿದೆಯೇ ? ಎಂದು ಸವಾಲು ಹಾಕಿದ್ದಾರೆ.
ಅವರ ಕುರ್ಚಿ ಗಟ್ಟಿಯಾಗಿದ್ದರೆ ಸಂಪುಟ ವಿಸ್ತರಣೆಗಾಗಿ ಹೈಕಮಾಂಡ್ ಬಳಿ ಗೋಗರೆಯುವ, ಕೈಕಾಲು ಹಿಡಿಯುವ ಅಗತ್ಯವಿರುತ್ತಿರಲಿಲ್ಲ. ಕೆಲವರಿಗೆ ಮಂತ್ರಿ ಸ್ಥಾನ ಕೊಡಲು ಕಾನೂನಿನ ತೊಡಕಿದೆ ಎಂಬುದು ಗೊತ್ತಿದ್ದರೂ ಸುಳ್ಳು ವಾಗ್ದಾನ ನೀಡಿ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಹಾಗಾಗಿ ಬಿಜೆಪಿ ಸೇರಿದ ಕೆಲವರು ಬಾಯಿ ಬಡ್ಕೊತಿರೋದು ಎಂದು ಹೇಳಿದ್ದಾರೆ.

Join Whatsapp
Exit mobile version