ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ..!

Prasthutha|

ಹೈದರಾಬಾದ್: ಬೆಂಗಳೂರು ಮೂಲದ ಹೈದರಾಬಾದ್ ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ವಿಭಾಗವು ದಾಳಿ ನಡೆಸಿದೆ.

- Advertisement -


ತೆಲಂಗಾಣದ ರಾಮೇಶ್ವರಂ ಕೆಫೆ ಹೊಟೇಲ್ ಮೇಲೆ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಹಲವಾರು ಆಹಾರ ಸುರಕ್ಷತಾ ಉಲ್ಲಂಘನೆಯಾಗಿರುವುದನ್ನು ಪತ್ತೆ ಹಚ್ಚಿದೆ. ಈ ರೆಸ್ಟೋರೆಂಟ್ ನಲ್ಲಿ ಅವಧಿ ಮುಗಿದ ಮತ್ತು ಲೇಬಲ್ ಮಾಡದ ಆಹಾರ ಪದಾರ್ಥಗಳನ್ನು ಬಳಸುತ್ತಿರುವುದು ಕಂಡುಬಂದಿದೆ.


ಆಹಾರ ಸುರಕ್ಷತಾ ಇಲಾಖೆ ಪ್ರಕಾರ, 16,000 ಮೌಲ್ಯದ 100 ಕೆ.ಜಿ ಉದ್ದಿನ ಬೇಳೆ, 10 ಕೆಜಿ ನಂದಿನಿ ಮೊಸರು ಮತ್ತು ಎಂಟು ಲೀಟರ್ ಹಾಲು ಅವಧಿ ಮುಗಿದಿದ್ದು, ಈ ಎಲ್ಲಾ ವಸ್ತುಗಳು ಅಡುಗೆಮನೆಯಲ್ಲಿ ಕಂಡುಬಂದಿದೆ.

Join Whatsapp
Exit mobile version