ರೀಮಲ್ ಚಂಡಮಾರುತ: ಬಾಂಗ್ಲಾದೇಶದಲ್ಲಿ 7 ಮಂದಿ ಮೃತ್ಯು

Prasthutha|

ಢಾಕಾ: ‘ರೀಮಲ್’ ಚಂಡಮಾರುತ ಬಾಂಗ್ಲಾದೇಶದ ಕರಾವಳಿ ಭಾಗಕ್ಕೆ ಅಪ್ಪಳಿಸಿದೆ. ಈ ಭಾಗದಲ್ಲಿ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಭಾರಿ ಮಳೆಯಿಂದ ನೂರಾರು ಹಳ್ಳಿಗಳು ಜಲಾವೃತಗೊಂಡಿವೆ. ಘಟನೆಯಲ್ಲಿ ಕನಿಷ್ಠ ಏಳು ಜನರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

80-90 ಕಿ.ಮೀ ವೇಗದಲ್ಲಿ ಗಾಳಿ ಬೀಸಿದೆ. ಸೋಮವಾರ ಮುಂಜಾನೆ 5.30ರ ಸುಮಾರಿಗೆ ಸಾಗರ್ ದ್ವೀಪದ ಈಶಾನ್ಯಕ್ಕೆ 150 ಕಿ.ಮೀ ವೇಗದಲ್ಲಿ ಬೀಸಿದ ಗಾಳಿಯು ಧಾರಾಕಾರ ಮಳೆಯನ್ನು ಸುರಿಸಿದೆ. ಮತ್ತಷ್ಟು ಈಶಾನ್ಯಕ್ಕೆ ಚಲಿಸಿ ಚಂಡಮಾರುತ ದುರ್ಬಲವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Join Whatsapp