ನವದೆಹಲಿ: ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿಯಾಗಿ ಹಿರಿಯ ರಾಜತಾಂತ್ರಿಕ ಅಧಿಕಾರಿ, ಪ್ರಸ್ತುತ ಭೂತಾನ್ ದೇಶದ ಭಾರತದ ರಾಯಭಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ರುಚಿರಾ ಕಾಂಬೋಜ್ ನೇಮಕಗೊಂಡಿದ್ದಾರೆ.
ಕಾಂಬೋಜ್, 1987ರ ಬ್ಯಾಚ್ ನ ಭಾರತೀಯ ವಿದೇಶಾಂಗ ಸೇವೆಯ (ಐಎಫ್ಎಸ್) ಅಧಿಕಾರಿಯಾಗಿದ್ದರು. 2002 ರಿಂದ 2005 ರವರೆಗೆ ವಿಶ್ವಸಂಸ್ಥೆಯಲ್ಲಿ ಭಾರತದ ಶಾಶ್ವತ ಮಿಷನ್ನಲ್ಲಿ ಸಲಹೆಗಾರರಾಗಿ ನೇಮಕಗೊಂಡಿದ್ದರು. 2006- 2009 ರವರೆಗೆ ದಕ್ಷಿಣ ಆಫ್ರಿಕಾದ ಕೇಪ್ ಟೌನ್ನಲ್ಲಿ ಭಾರತದ ಕಾನ್ಸುಲ್ ಜನರಲ್ ಆಗಿಯೂ ಸೇವೆ ಸಲ್ಲಿಸಿದ್ದರು.
ರುಚಿರಾ ಕಾಂಬೋಜ್ ಅವರು ಅತೀ ಶೀಘ್ರದಲ್ಲಿ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.