ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ದರ್ಶನ್ರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್ ಗೌಡ, ಪ್ರದೋಶ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜುಲೈ 11 ರಂದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ಪ್ರಸ್ತುತ ಅವರು ಅನಾರೋಗ್ಯದ ಕಾರಣ ನೀಡಿ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದಿದ್ದಾರೆ. ಈಗ ಅವರಿಗೆ ಜಾಮೀನು ಮಂಜೂರಾಗಿದ್ದು, ತಾತ್ಕಾಲಿಕ ನಿರಾಳತೆ ದೊರಕಿದೆ.