ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್​​ಗೆ ಅರ್ಜಿ

Prasthutha|

ಬೆಂಗಳೂರು: ಹಾಸನ ಜಿಲ್ಲೆ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್​ ಡಿ. ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ.

- Advertisement -

ಎಸ್​ಐಟಿ ಈಗಾಗಲೇ ಈ ಪ್ರಕರಣ ತನಿಖೆಯನ್ನು ಚುರುಕುಗೊಳಿಸಿದ್ದು, ಮಹತ್ವದ ಮಾಹಿತಿ ಕಲೆಹಾಕುತ್ತಿದೆ. ವಿಚಾರಣೆಗೆ ಹಾಜರಾಗುವಂತೆ ರೇವಣ್ಣ ಮತ್ತು ಪ್ರಜ್ವಲ್​ಗೆ ನೋಟಿಸ್ ಜಾರಿ ಮಾಡಿದೆ. ಇದರ ಮಧ್ಯೆ ರೇವಣ್ಣಗೆ ಬಂಧನ ಭೀತಿ ಎದುರಾಗಿದ್ದು, ಕೋರ್ಟ್​ ಮೆಟ್ಟಿಲೇರಿದ್ದಾರೆ.

ಪೊಲೀಸರು ಐಪಿಸಿ ಸೆಕ್ಷನ್ 354ಎ (ಲೈಂಗಿಕ ಕಿರುಕುಳ), 354ಡಿ (ಮಹಿಳೆಗೆ ಮುಜುಗರ), 506 (ಬೆದರಿಕೆ), 509 (ಮಹಿಳೆಯರ ಮರ್ಯಾದೆಗೆ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ರೇವಣ್ಣ ಅವರನ್ನು ಎ1 ಆರೋಪಿ ಮತ್ತು ಪ್ರಜ್ವಲ್ ರೇವಣ್ಣ ಅವರನ್ನು ಎ2 ಆರೋಪಿಯನ್ನಾಗಿ ಮಾಡಿದ್ದಾರೆ.

Join Whatsapp