ರೈತರಿಗೆ ಬೆಂಬಲ ಸೂಚಿಸಿ ಕ್ಯಾಂಪಸ್ ಫ್ರಂಟ್ ನಿಂದ ರಾಜ್ಯಾದ್ಯಂತ ಪ್ರತಿಭಟನಾ ಪ್ರದರ್ಶನ

Prasthutha|

ಕೇಂದ್ರ ಸರಕಾರ ಜಾರಿಗೆ ತಂದಿರುವ ನೂತನ ಕೃಷಿ ಮಸೂದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಕ್ಯಾಂಪಸ್ ಫ್ರಂಟ್ ವತಿಯಿಂದ ರಾಷ್ಟ್ರ ವ್ಯಾಪಿ ಕರೆ ನೀಡಿರುವ ‘ಸಾಲಿಡಾರಿಟಿ ವಿತ್ ಫಾರ್ಮರ್ಸ್’ ಅಭಿಯಾನದ ಭಾಗವಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ರೈತರನ್ನು ಬೆಂಬಲಿಸಿ ಪ್ರತಿಭಟನಾ ಪ್ರದರ್ಶನ ನಡೆಯಿತು.
ರಾಜಧಾನಿ ಬೆಂಗಳೂರು, ಕಲಬುರಗಿ, ಕೊಪ್ಪಳ, ಮಂಗಳೂರು, ಕುಂದಾಪುರ, ಉಡುಪಿ, ಪುತ್ತೂರು, ಬಂಟ್ವಾಳ ಮುಂತಾದ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ರೈತರನ್ನು ಬೆಂಬಲಿಸಿ ಬಿತ್ತಿ ಪತ್ರ ಪ್ರದರ್ಶನ, ಕ್ರಾಂತಿ ಗೀತೆ, ಅಣಕು ಪ್ರದರ್ಶನ ಇನ್ನಿತರ ಕಾರ್ಯಕ್ರಮಗಳನ್ನು ನಡೆಸಿದರು.
ಈ ಸಂದರ್ಭ ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾಧ್ಯಕ್ಷ ಹಸನ್ ಸಿರಾಜ್ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಸರಕಾರವು ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ವಿದ್ಯಾರ್ಥಿಗಳು, ದಲಿತರು, ಶಿಕ್ಷಕರು ಹೀಗೆ ವಿವಿಧ ವರ್ಗದ ಜನರ ಜೀವನ ದುಸ್ತರವಾಗಿದೆ. ಈಗ ರೈತರ ಸರದಿ. ಸರಕಾರವು ಕಾರ್ಪೊರೇಟ್ ಶಕ್ತಿಗಳಾದ ಅಂಬಾನಿ – ಅದಾನಿಗಳ ಎಂಜಲು ಕಾಸಿಗಾಗಿ ರೈತರಿಗೆ ಮೋಸ ಮಾಡುತ್ತಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅನರ್ಹ ಸಚಿವರಾಗಿದ್ದು, ರೈತರ ಸಮಸ್ಯೆಯನ್ನು ಬಗೆಹರಿಸಲು ಇದುವರೆಗೆ ಅವರಿಗೆ ಸಾಧ್ಯವಾಗಿಲ್ಲ. ಕೂಡಲೇ ಕೇಂದ್ರ ಸರಕಾರವು ರೈತರ ಸಮಸ್ಯೆಗಳಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

Join Whatsapp