ರೈತರ ಹೋರಾಟಕ್ಕೆ ಬೆಂಬಲ | ಮೋದಿಗೆ ರಕ್ತ ಪತ್ರ

Prasthutha|

- Advertisement -

ದಾವಣಗೆರೆ : ವಿವಾದಾತ್ಮಕ ರೈತ ವಿರೋಧಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿ ಇಂದು  ಮೋದಿಗೆ ರಕ್ತದಿಂದ ಪತ್ರ ಬರೆದು ಕಳುಹಿಸಿದೆ. ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜು ವಿ. ಶಿವಗಂಗಾ ನೇತೃತ್ವದಲ್ಲಿ ರಕ್ತ ಪತ್ರ ಚಳವಳಿ ನಡೆಸಿ ರೈತರಿಗೆ ಬೆಂಬಲ ವ್ಯಕ್ತಪಡಿಸಿದೆ. ನಗರದ ಮಂಡಿಪೇಟೆಯ ಪ್ರಧಾನ ಅಂಚೆ ಕಚೇರಿ ಮುಂಭಾಗ ಕಾರ್ಯಕರ್ತರು ರಕ್ತದಲ್ಲಿ ಪತ್ರ ಬರೆದು ಪ್ರಧಾನಮಂತ್ರಿಗಳಿಗೆ ಕಳುಹಿಸಿದ್ದಾರೆ.

“ಕಳೆದ 70 ದಿನಗಳಿಂದ ದೆಹಲಿಯಲ್ಲಿ ರೈತರು ಹೋರಾಟ ಮಾಡುತ್ತಿದ್ದರೂ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿಲ್ಲ. ಸುಪ್ರೀಂ ಕೋರ್ಟ್ ಈ ಕಾಯ್ದೆಗಳಿಗೆ ತಾತ್ಕಾಲಿಕವಾಗಿ ತಡೆ ಹಿಡಿದಿದೆ. ಆದರೂ ನರೇಂದ್ರ ಮೋದಿ ಅವರು ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯದೆ ಮೊಂಡುತನ ಪ್ರದರ್ಶನ ಮಾಡುತ್ತಿದ್ದಾರೆ” ಎಂದು ಬಸವರಾಜು ವಿ.ಶಿವಗಂಗಾ ಹೇಳಿದ್ದಾರೆ.

- Advertisement -

ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು, ಕಾಯ್ದೆಗಳನ್ನು ಹಿಂಪಡೆಯುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಅವರು ಎಚ್ಚರಿಕೆ ನೀಡಿದ್ದಾರೆ.  ಕಿಸಾನ್ ಕಾಂಗ್ರೆಸ್ ಕಾರ್ಯಕರ್ತರು ಜಿ.ಪಂ ಕಚೇರಿ ಮುಂಭಾಗ ಹೆದ್ದಾರಿ ತಡೆದು ಕೇಂದ್ರ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಪ್ರತೀಭಟನೆ ನಡೆಸಿದ್ದಾರೆ. ರೈತರ ಹೋರಾಟಕ್ಕೆ ನಮ್ಮ ಬೆಂಬಲ ಸದಾ ಇರುತ್ತದೆ. ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಹೋರಾಟಕ್ಕೆ ದೇಶಾದ್ಯಂತ ಬೆಂಬಲ ವ್ಯಕ್ತವಾಗುತ್ತಿದೆ.ರೈತರಿಗೆ ಬೆಂಬಲವಾಗಿ ಕಿಸಾನ್ ಕಾಂಗ್ರೆಸ್ ಕೆಲಸ ಮಾಡುತ್ತದೆ. ಪ್ರಧಾನಿ ನರೇಂದ್ರ ಮೋದಿಯವರು ರೈತರ ವಿರೋಧ ಕಟ್ಟಿಕೊಂಡು ಕಾರ್ಪೋರೇಟ್ ಸಂಸ್ಥೆಗಳ ಪರವಾಗಿ ಕೆಲಸ ಮಾಡಲು ಮುಂದಾಗಿರುವುದು ಸರಿಯಲ್ಲ ಎಂದು  ಬಸವರಾಜು ವಿ.ಶಿವಗಂಗಾ ದೂರಿದ್ದಾರೆ.

Join Whatsapp